Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೂ ಉಚಿತ ಪ್ರಯಾಣಕ್ಕೆ ಆಗ್ರಹ

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.10: ರಾಜ್ಯ ಸರಕಾರ ಭಾನುವಾರದಿಂದ ಮಹಿಳೆಯರು ಬಸ್ ನಲ್ಲಿ ಪ್ರಯಾಣಕ್ಕೆ ಉಚಿತ ಅವಕಾಶ ನೀಡಲಾಗಿದೆ. ಇದೇ ವೇಳೆ ವಿಕಲಚೇತರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಬೇಕೆಂದು ಕೊಪ್ಪಳದಲ್ಲಿ ವಿಕಲಚೇತನರ ಪರವಾಗಿ ವಿಕಲಚೇತನ ನೌಕರರ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿಆಗ್ರಹಿಸಿದ್ದಾರೆ.

ಇಂದು ಹಲವು ವಿಕಲಚೇತನರೊಂದಿಗೆ ಮಾಧ್ಯಮಗಳ ಮೂಲಕ ಆಗ್ರಹಿಸಿ, ಕಾಂಗ್ರೆಸ್ ಅಧಿಕಾರ ಬರಲು 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದು. ಈ ಭರವಸೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೊದಲು ಭರವಸೆಯಾದ ಮಹಿಳೆಯರು ರಾಜ್ಯಾದಾದ್ಯಂತ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಜ್ಯ ಸರಕಾರ ಶಕ್ತಿ ಯೋಜನೆಗಳನ್ನು ಚಾಲನೆ ನೀಡುತ್ತಿರುವುದು ವಿಕಲಚೇತನರು ಸ್ವಾಗತಿಸಿದ್ದಾರೆ. ಇದೇ ವೇಳೆ ವಿಕಲಚೇತನರಿಗೆ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಬಸ್ ಗಳಲ್ಲಿ ವಿಕಲಚೇತನರು ಪ್ರಯಾಣಿಸಲು 600 ರೂಪಾಯಿ ಪಡೆಯುತ್ತಿದ್ದಾರೆ. ವಿಕಲಚೇತನರ ಸ್ಥಳದಿಂದ 100 ಕಿಮೀ ಪ್ರಯಾಣಿಸಲು ಅವಕಾಶವಿದೆ. ಆದರೆ ವಿಕಲಚೇತನರು ರಾಜ್ಯದಲ್ಲಿ ಪ್ರಯಾಣಿಸಲು ಮುಖ್ಯಮಂತ್ರಿಗಳಲ್ಲಿ ತಮ್ಮ ಅಹವಾಲು ಸಲ್ಲಿಸಲು ಬಸ್ ಸೇವೆಯನ್ನು ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಸಂಕಷ್ಟದಲ್ಲಿರುವ ವಿಕಲಚೇತನರು ಕೊಪ್ಪಳದಿಂದ ಬೆಂಗಳೂರಿಗೆ ಹೋಗಬೇಕಾದರೆ ಅವರು ಕೂಡ್ಲಗಿಯವರೆಗೆ ಮಾತ್ರ ಉಚಿತವಾಗಿ ಪ್ರಯಾಣಿಸಿ ಅಲ್ಲಿಂದ ಹಣ ಕೊಟ್ಟು ಪ್ರಯಾಣಿಸಬೇಕು. ಕೆಲಸ ಮಾಡಲು ಅಸಮರ್ಥರಾಗಿರುವ ಹಾಗು ದುಡಿಮೆ ಇಲ್ಲದ ವಿಕಲಚೇತನರಿಗೆ ಪ್ರಯಾಣಿಸಲು ಆಗುತ್ತಿಲ್ಲ. ಮಹಿಳೆಯರಿಗೆ ಹೇಗೆ ಉಚಿತ ಬಸ್ ಸೇವೆ ನೀಡಲಾಗಿದೆಯೊ ಅದೇ ಮಾದರಿಯಲ್ಲಿ ನಮಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ