Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬಿಗೆ ಹೆಚ್ಚುವರಿ ದರ ನಿಗದಿ, ಬಾಕಿ ಹಣ ಪಾವತಿಸಲು ಆಗ್ರಹ

ಸುದ್ದಿಮೂಲ ವಾರ್ತೆ

ಮೈಸೂರು, ನ.09 : ಕಬ್ಬಿಗೆ ಹೆಚ್ಚುವರಿ ದರ ನಿಗದಿ ಮಾಡಲು ಮತ್ತು ಕಳೆದ ವರ್ಷದ ಬಾಕಿ ಹಣ ಕೊಡಿಸಲು ಆಗ್ರಹಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಗುರುವಾರ ರೈತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ನಂತರ ಪೊಲೀಸರು ರೈತರನ್ನು ಬಂಧಿಸಿದರು.

ಸಿಎಂ ಮನೆ ಬಳಿ ರೈತರು ಚಳವಳಿಗೆ ಬರದಂತೆ ತಡೆಯಲು ಪೊಲೀಸರು ಒಂದು ಕಿಲೋ ಮೀಟರ್ ದೂರದಲ್ಲಿಯೇ ಸರ್ಪಗಾವಲು ಹಾಕಿದ್ದರು. ಪೊಲೀಸರ ಕಣ್ ತಪ್ಪಿಸಿ ರೈತರು ಸಿಎಂ ಮನೆ ಹತ್ತಿರವೇ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಬಂದರು. ಆಗ ಪೊಲೀಸರು ಧರಣಿ ನಡೆಸಲು ಬಿಡದೆ ರಸ್ತೆ ಮಧ್ಯದಲ್ಲಿಯೇ ಬಂಧಿಸಿದರು. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು. ಯಾವ ಕಾರಣಕ್ಕಾಗಿ ನಮ್ಮನ್ನು ಧರಣಿ ನಡೆಸಲು ಬಿಡುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು, ಉತ್ತರ ನೀಡದೆ ಬಲತ್ಕಾರವಾಗಿ ಬಂಧಿಸಿದರು

ಈ ವೇಳೆ ರಾಜ್ಯ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಮಾತನಾಡಿ, ಸರ್ಕಾರದಲ್ಲಿ ಇರುವ ಜನಪ್ರತಿನಿಧಿಗಳು ದನ ಕಾಯುವ ಆಡಳಿತ ಮಾಡುತ್ತಿದ್ದಾರೆ, ರೈತರ ಮೂಗಿಗೆ ತುಪ್ಪ ಸವರುವ ನಾಟಕ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರ ವ್ಯಾಪ್ತಿಯಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಅವರಿಂದ ನ್ಯಾಯ ಕೊಡಿಸಲು ಸಾಧ್ಯವಾಗದ ಮುಖ್ಯಮಂತ್ರಿ ರಾಜ್ಯದ ಕಬ್ಬು ಬೆಳೆಗಾರರಿಗೆ ಹೇಗೆ ನ್ಯಾಯ ಕೊಡಿಸುತ್ತಾರೆ ಎಂದು ಪ್ರಶ್ನಿಸಿದರು.

ರಾಜ್ಯದ ಬಹುತೇಕ ಕಾರ್ಖಾನೆಗಳು ಈಗಾಗಲೇ ಹೆಚ್ಚುವರಿ ದರ ಘೋಷಣೆ ಮಾಡಿ ರೈತರಿಗೆ ನೀಡುತ್ತಿದ್ದಾರೆ. ಅದಕ್ಕಾಗಿ ಧರಣಿ ನಡೆಸಲು ಪ್ರಯತ್ನಿಸಿದರೆ ಪೊಲೀಸ್ ಬಲದ ಮೂಲಕ ಹತ್ತಿಕುವ ಕಾರ್ಯ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಇವರಿಗೆ ನೈತಿಕತೆ ಇಲ್ಲದಂತಾಗಿದೆ ಎಂದರು.

ರಾಜ್ಯ ಸರ್ಕಾರ ಹಿಂದಿನ ಸಾಲಿನಲ್ಲಿ ನಿಗದಿ ಮಾಡಿದ್ದ ಕಬ್ಬಿನ ಹೆಚ್ಚುವರಿ ದರ ಟನ್ ಗೆ 150 ರೂ. ಕೊಡಿಸಿ, ಪ್ರಸಕ್ತ ಸಾಲಿನ ದರ ಏರಿಕೆ ಮಾಡಲು ಒತ್ತಾಯಿಸಿ, ರಾಜ್ಯ ಸರ್ಕಾರ ಇಬ್ಬಗೆ ನೀತಿ ಅನುಸರಿಸದೆ ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಇಳುವರಿ ಕಡಿಮೆಯಾಗಿ ಉತ್ಪಾದನಾ ವೆಚ್ಚ ಏರಿಕೆಯಾಗಿ ಟನ್ ಗೆ 3580 ಖರ್ಚು ಬರುತ್ತಿದೆ. ಆದ್ದರಿಂದ ದರ ಪರಿಷ್ಕರಣೆ ಮಾಡಿ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಬ್ಬಿನ ಇಳುವರಿ ಕಡಿಮೆಯಾಗಿ ಬೇರೆ ಜಿಲ್ಲೆಗಳಲ್ಲಿ ಸಕ್ಕರೆ ಕಾರ್ಖಾನೆಗಳು ಪೈಪೋಟಿಯಲ್ಲಿ ಕಬ್ಬು ಖರೀದಿಸುತ್ತಿವೆ. ಎಫ್ ಆರ್ ಪಿ ಗಿಂತ ಹೆಚ್ಚು 300 ದರ ನಿಗದಿ ಮಾಡಿವೆ, ಆದರೆ ಬಣ್ಣಾರಿ ಸಕ್ಕರೆ ಕಾರ್ಖಾನೆ ಮಾತ್ರ ಹೆಚ್ಚು ದರ ನಿಗದಿ ಮಾಡದೆ ನಿರ್ಲಕ್ಷತನ ತೋರುತ್ತಿದೆ. ರೈತರ ಶೋಷಣೆ ಮುಂದುವರಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಸರ್ಕಾರದ ಆದೇಶ ಧಿಕ್ಕರಿಸಿರುವ ಕಾರಣ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ರೈತರ ಹಣ ಕೊಡಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ.

ರೈತರಿಗೆ ಮಾತ್ರ ಬರಗಾಲ, ಮಳೆ ಕಡಿಮೆ ವಿದ್ಯುತ್ ಉತ್ಪಾದನೆ ಕುಂಠಿತ ಕಾರಣ ಹೇಳಿ 5 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಇದೇ ಸರ್ಕಾರ ಕೈಗಾರಿಕೆಗಳಿಗೆ ಉದ್ಯಮಿಗಳಿಗೆ ಸಮರ್ಪಕ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರದ ಇಬ್ಬಗೆ ನೀತಿ ಸರಿಯಲ್ಲ, ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಇದು ಯಾವ ನ್ಯಾಯ. ಸರ್ಕಾರ ಎಚ್ಚೆತ್ತುಕೊಂಡು ಹಗಲು ಹೊತ್ತಿನಲ್ಲಿ 10 ಗಂಟೆಗಳ ವಿದ್ಯುತ್ ನೀಡಬೇಕು. ರೈತರು ಈಗಾಗಲೇ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಮತ್ತಷ್ಟು ರೈತರು ಬೀದಿಪಾಲಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಕಾರ್ಯದರ್ಶಿ ಬರಡನಫುರ ನಾಗರಾಜ್, ಕಾರ್ಯಾಧ್ಯಕ್ಷ ಹಳಿಕರೆಹುಂಡಿ ಬಾಗ್ಯರಾಜ್, ಜಿಲ್ಲಾ ಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಮಹಿಳಾಧ್ಯಕ್ಷ ಕಮಲಮ್ಮ ಜಿಲ್ಲಾ ಉಪಾಧ್ಯಕ್ಷ ರಾಜಣ್ಣ ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್ ಅಧ್ಯಕ್ಷ ಹಾಡ್ಯರವಿ, ಲಕ್ಷ್ಮಿಪುರವೆಂಕಟೇಶ,ರಾಜಣ್ಣ, ನೆಲಮಂಗಲ ರಾಜೇಶ್, ಜಗದೀಶ್, ನೀಲಕಂಠಯ್ಯ, ಗಟ್ಟಿ. ಬೈರಪ್ಪ, ಹಾಸನ ಮೀಸೆ ಮಂಜಣ್ಣ, ಹಾಸನ ಜಿಲ್ಲೆ ಆಲೂರು ತೀರ್ಥ ಪ್ರಸಾದ್, ರವಿಕುಮಾರ್ ಸೇರಿದಂತೆ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ