Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂ ಸ್ವಾಧೀನ ಕುರಿತು ಸರ್ಕಾರ ಸ್ಪಷ್ಟತೆ ನೀಡಲು ಆಗ್ರಹ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 13 : ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಂತಿನಿರತ ರೈತರನ್ನು ಪೊಲೀಸರಿಂದ ದಾಳಿ ಮಾಡಿಸಿದ್ದ ಕಾರಳ ನೆನೆಪಿನ ನಡುವೆ, ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿಯಾದರೂ ನಮ್ಮ‌ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆ ಸರ್ಕಾರ ಹಿಂಪಡೆಯುವ ಭರವಸೆಯಲ್ಲಿದ್ದೇವೆ ಎಂದು ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.

ಪಟ್ಡಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹೊಸ ಸರ್ಕಾರವೂ ಅಸ್ತಿತ್ವಕ್ಕೆ ಬಂದಿದ್ದು, ರೈತಪರ ನಿಲುವು ಹೊಂದಬೇಕು' ಎಂದು ಒತ್ತಾಯಿಸಿದರು.

ಈ ಹಿಂದೆ ಬೆಂಗಳೂರಿನ ಫ್ರೀಡಂ‌ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವ ವೇಳೆಯಲ್ಲಿ ಸಿದ್ದರಾಮಯ್ಯರವರು ಭೇಟಿ ನೀಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವುದಾಗಿ ಭರವಸೆ ನೀಡಿದ್ದರು, ಇದೀಗಾ ಅವರೇ ಮುಖ್ಯಮಂತ್ರಿಯಾಗಿದ್ದು ಕೂಡಲೇ ರೈತಪರವಾಗಿ ನಿರ್ಧಾರ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪರವರು ಧರಣಿ ಸ್ಥಳಕ್ಕೆ ಭೇಟಿಯಾದಾಗ ಹಾಗೂ ರೈತ ಹೋರಾಟಗಾರರೊಂದಿಗೆ ಸಭೆ ನಡೆಸಿದಾಗಲೂ ಅತೀ ಶೀಘ್ರದಲ್ಲೇ ಶಾಶ್ವತ ಪರಿಹಾರ ನೀಡಲಾಗುವುದು ಎಂದಿದ್ದರೂ, ಹೋರಾಟ ಪ್ರಾರಂಭವಾಗಿ 500 ದಿನಗಳದರೂ ಯಾವ ಸರ್ಕಾರವೂ ಸ್ಪಷ್ಟ ನಿರ್ಧಾರ ತಳದೇ ಇರುವುದು ಬೇಸರದ‌ ಸಂಗತಿ' ಎಂದರು.

ರೈತ ಮುಖಂಡ ನಂಜಪ್ಪ ಮಾತನಾಡಿ, 'ರೈತರ ಹೋರಾಟಕ್ಕೆ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಸ್ವಾಮಿಗಳಾದ ಡಾ.ನಿರ್ಮಲಾನಂದ ಸ್ವಾಮಿಗಳು ಬೆಂಬಲ ನೀಡಿದ್ದು, ಸಚಿವರಾದ ಮುನಿಯಪ್ಪರಿಗೆ ಈ ಕುರಿತು ತಿಳಿಸಿದ್ದಾರೆ. ಆದಾಗ್ಯೂ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ರೈತರನ್ನು ಶೋಷಿಸುತ್ತಿದೆ' ಎಂದು ಬೇಸರಗೊಂಡರು.

ಇದೇ ವೇಳೆ ತಿಮ್ಮರಾಯಪ್ಪ, ರಮೇಶ್, ಮುಕುಂದ, ನಂದನ್, ವೆಂಕಟರಮಣ್ಣಪ್ಪ‌ ಸೇರಿದಂತೆ ಇತರರು ಇದ್ದರು.

ಕರಾಳ‌‌ ದಿನದ ನೆನೆಪಿಗೆ ರೈತ ನಡಿಗೆ ತಾಲ್ಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ನಮ್ಮ ಭೂಮಿ ಕಬ್ಬಳಿಸಲು ಬ್ರಿಟಿಷರ ಸಂತತಿಯಂತೆ ದಾಳಿ ಮಾಡುತ್ತಿರುವ ಬಂಡವಾಳಶಾಯಿಗಳ ವಿರುದ್ಧ ಭೂ ಸ್ವಾಧೀನದಿಂದ ಬಾಧಿತವಾಗುವ‌ 13 ಹಳ್ಳಿಗಳಲ್ಲಿಯೂ 'ಕೃಷಿ ಭೂಮಿ ಸ್ವತಂತ್ರಕ್ಕಾಗಿ ರೈತರ ನಡಿಗೆ' ಜಾಗೃತಿ ಜಾಥ ಹಮ್ಮಿಕೊಳ್ಳಲಿದ್ದು, ಈ ಬಾರಿ ಜಿಲ್ಲಾ ಕಾರ್ಯಕ್ರಮಕ್ಕೆ ಯಾವುದೇ ಮುತ್ತಿಗೆ, ಪ್ರತಿಭಟನೆ ಮಾಡುವುದಿಲ್ಲ' ಎಂದು ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ