Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ ಪರಮೇಶ್ವರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 16: ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಡಾಕ್ಟರ್ ಜಿ.ಪರಮೇಶ್ವರ್ ಅವರಿಗೆ ಈ ಬಾರಿಯಾದರೂ ಮುಖ್ಯಮಂತ್ರಿ ಸ್ಥಾನ ನೀಡಿ ಕಾಂಗ್ರೆಸ್ ಪಕ್ಷ ದಲಿತರ ಪರವಾಗಿದೆ ಎಂದು ಖಚಿತಪಡಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಗಳಕೋಟೆ ನರಸಿಂಹರಾಜು  ತಿಳಿಸಿದರು.

ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರಣರಾಗಿದ್ದಾರೆ. ಹಾಗೆಯೇ ಈ ಬಾರಿಯೂ ಪ್ರಣಾಳಿಕೆ ಅಧ್ಯಕ್ಷರಾಗಿ ಗ್ಯಾರಂಟಿ ಭಾಗ್ಯಗಳನ್ನು ಹಾಗೂ ಉತ್ತಮ ಪ್ರಣಾಳಿಕೆಯನ್ನು ನೀಡಿ ಪಕ್ಷ ಅಭೂತಪೂರ್ವ ಯಶಸ್ಸನ್ನು ಕಾಣಲು ಕಾರಣಕರ್ತರಾಗಿದ್ದಾರೆ. ಹಾಗಾಗಿ ಡಾ. ಜಿ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ದರೆ

ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂದಿದ್ದಾರೆ.

ದಲಿತರಲ್ಲರು ಯಾವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಜೊತೆ ಇರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ದಲಿತರ ಸಂಖ್ಯೆ ಸುಮಾರು 25 ಭಾಗದಷ್ಟು ಜನಸಂಖ್ಯೆ ಇದೆ. ಸ್ವತಂತ್ರ ಬಂದು 75 ವರ್ಷಗಳು ಕಳೆದರು ಸಹ ಇನ್ನೂ ಕೂಡ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಅನ್ನುವುದು ಮರಿಚಿಕೆಯಾಗಿ ಉಳಿದಿದೆ. ಈಗ ಎಐಸಿಸಿ

ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಯವರಿಗೂ ಸಹ ಮುಖ್ಯಮಂತ್ರಿ ಸ್ಥಾನ ತಪ್ಪಿಸಿ ಅವರನ್ನು ಕೇಂದ್ರಕ್ಕೆ

ಕಳಿಸಲಾಯಿತು. ಈ ಬಾರಿ ಕರ್ನಾಟಕದಲ್ಲಿ ಸುಮಾರು 135ಕ್ಕೂ ಹೆಚ್ಚು ಶಾಸಕರಾಗಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಈ ಗೆಲುವಿನಲ್ಲಿ ಡಾ. ಜಿ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆಯವರ ಪಾತ್ರವು ಬಹುದೊಡ್ಡದಿದೆ. ಹಾಗಾಗಿ ದಲಿತ ನಾಯಕ ಡಾಕ್ಟರ್ ಜಿ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ನರಸಿಂಹಮೂರ್ತಿ ಭೀಮಸಂದ್ರ, ರಜನಿಕಾಂತ್, ಗಿರಿ ಸ್ವಾಮಿ, ಗೋವಿಂದರಾಜು, ರಾಜಣ್ಣ, ಜೆಬಿ ಹಾಗೂ ಮುಂತಾದವರು ಉಪಸ್ಥಿತರಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ