Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಡೆಂಗ್ಯೂ ರಥಯಾತ್ರೆಗೆ ಚಾಲನೆ

ಸುದ್ದಿಮೂಲ ವಾರ್ತೆ

ತುಮಕೂರು ಆ.17: ಮಲೇರಿಯಾ, ಚಿಕುನ್ ಗುನ್ಯಾ, ಡೆಂಗ್ಯೂ ಮತ್ತು ಮೆದುಳುಜ್ವರ ಕಾಯಿಲೆಗಳು ಮಾನ್ಸೂನ್ ಮಳೆಗಾಲದ ನಂತರ ಉಲ್ಬಣಗೊಂಡು ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ಹೆಚ್ಚಾಗಿ ಸಂಭವಿಸುತ್ತವೆ. ಆದ್ದರಿಂದ. ನಾಗರೀಕರು ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಹೇಳಿದರು.

ಇಂದು ತಮ್ಮ ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಮಲೇರಿಯಾ, ಚಿಕುನನ್‌ ಗುನ್ಯಾ, ಮೆದುಳುಜ್ವರ ಮತ್ತು ಡೆಂಗ್ಯೂ ಈ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಡೆಂಗ್ಯೂ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು,ರಥಯಾತ್ರೆಯು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಎರಡು ದಿನಗಳ ಕಾಲ ಸಂಚರಿಸಿ ಈ ಕಾಯಿಲೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಬಿ.ಎಂ. ಚಂದ್ರಶೇಖರ್ ಮಾತನಾಡಿ, ಗ್ರಾಮೀಣ ಭಾಗದ ಜನರು ಮನೆ ಮುಂದೆ ಇರುವ ನೀರಿನ ತೊಟ್ಟಿಗಳಿಂದ ನೀರು ಸೋರಿಕೆಯಾಗಿ ನಿಲ್ಲದಂತೆ, ಡ್ರಮ್‌ಗಳಿಗೆ ಮುಚ್ಚಳವನ್ನು ಹಾಕಬೇಕು, ಒಡೆದ ತೆಂಗಿನ ಚಿಪ್ಪುಗಳು, ಒಡೆದ ಬಕೆಟ್, ಪ್ಲಾಸ್ಟಿಕ್ ಕಪ್‌ಗಳಲ್ಲಿ ನೀರು ನಿಲ್ಲದ ರೀತಿಯಲ್ಲಿ ಕ್ರಮ ವಹಿಸಬೇಕು. ನಗರ ಪ್ರದೇಶಗಳಲ್ಲಿ ಮನೆಯಂಗಳದ ಹೂವಿನ ಕುಂಡಗಳ ತಟ್ಟೆಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಸೊಳ್ಳೆಗಳು ಉತ್ಪತಿಯಾಗುತ್ತವೆ ಎಂದರು. ಆದ್ದರಿಂದ ಈ ಕಾಯಿಲೆಗಳಿಂದ ತಪ್ಪಿಸಿಕೊಳ್ಳಬೇಕಾದರೆ, ಮನೆಯಲ್ಲಿ ಸೊಳ್ಳೆ ನಿರೋಧಕಗಳನ್ನು ಮತ್ತು ಸೊಳ್ಳೆ ಪರದೆಯನ್ನು ಬಳಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೈಲೆನ್ಸ್ ಅಧಿಕಾರಿ ಡಾ; ಮೋಹನ್‌ದಾಸ್ ಸಿಬ್ಬಂದಿಗಳಾದ ಪುಟ್ಟಯ್ಯ, ನಾಗೇಶ್, ಸತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ