Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾತಿನ ಬಾಣ ಮುಂದುವರಿಸಿದ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ‘ನಾನು ಬರೀ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಲ್ಲ’

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.25:
ನಾನು ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ತಮ್ಮ ಮಾತಿನ ಬಾಣ ಮುಂದುವರಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ನಾನು ಕಾಂಗ್ರೆೆಸ್‌ಗೆ ಜೀವಮಾನದ (ಲೆ್‌ೈ ಟೈಮ್) ಕಾರ್ಯಕರ್ತ. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿಿದ್ದೇನೆ, ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆೆಸ್ ಪಕ್ಷಕ್ಕೆೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದು ತಾವು ಮೂಲ ಕಾಂಗ್ರೆೆಸಿಗ ಎಂಬರ್ಥದ ದಾಟಿಯಲ್ಲಿ ಮಾತಿನ ಬಾಣ ಬೀಸಿದರು.
ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ. ಸಿಎಂಗೆ ಆಹ್ವಾಾನ ನೀಡಿದ್ದಾರೆ ಎಂದು ನನಗೂ ಗೊತ್ತಿಿದೆ. ಡೆಪ್ಯುುಟಿ ಸಿಎಂಗೆ ಕರೆದಿಲ್ಲ. ಸಮಿತಿಯ ವಿಸ್ತರಿತ ಸಭೆಗೆ ನನ್ನನ್ನು ಕರೆಯುತ್ತಾಾರೆ ಎಂದು ಪ್ರಶ್ನೆೆಯೊಂದಕ್ಕೆೆ ಉತ್ತರಿಸಿದರು.
ಖರ್ಗೆ ಅವರ ಜತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದರಾ ಎಂದು ಕೇಳಿದಾಗ, ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.
ಸ್ಥಳೀಯ ಮಟ್ಟದಲ್ಲಿ ಗೊಂದಲ ಬಗೆಹರಿಸಿಕೊಳ್ಳಿಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆೆ ಕೇಳಿದಾಗ, ಹಿರಿಯರು ಮಾರ್ಗದರ್ಶನ ನೀಡುತ್ತಾಾರೆ ಎಂದರು.
ಖರ್ಗೆ ಜೊತೆ ಏನೇನು ಚರ್ಚೆ:
ಶುಕ್ರವಾರದಂದು ಕಾಂಗ್ರೆೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆೆ ಹೆಚ್ಚಿಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಿಯಿತ್ತು. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗೂತ್ತಿಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಆದರೆ ಈಗ ಕೇಂದ್ರ ಸರ್ಕಾರವೇ ಯಾವ ಜಿಲ್ಲೆಯಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತದಂತೆ ಎಂದು ಹೇಳಿದರು.
ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು, ಇಂಗುಗುಂಡಿ ತೋಡಿಕೊಳ್ಳಲು, ಕೊಟ್ಟಿಿಗೆ ಕಟ್ಟಿಿಕೊಳ್ಳಲು - ಹೀಗೆ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುತ್ತಿಿತ್ತು. ಇಂತಹ ಅದ್ಬುತವಾದ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ನೀಡಿದ್ದರು. ಮುಂದಿನ 2026 ರ ೆಬ್ರವರಿ ವೇಳೆಗೆ ಈ ಯೋಜನೆಗೆ 20 ವರ್ಷ ತುಂಬಲಿದೆ. ಆದ ಕಾರಣ ದೊಡ್ಡ ಹೋರಾಟವನ್ನು ಹಮ್ಮಿಿಕೊಳ್ಳಲು ಆಲೋಚಿಸಲಾಗಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ