Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪಮುಖ್ಯಮಂತ್ರಿ ಡಿ.ಕೆ. ಶಿವಕುರ್ಮಾ ವಿಶ್ವಾಸ ಈ ವರ್ಷ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.01:
ಗ್ರೇಟರ್ ಬೆಂಗಳೂರು ಪ್ರಾಾಧಿಕಾರ (ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹೇಳಿದರು.
ಹೆಬ್ಬಾಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಾಟಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆೆಗಳಿಗೆ ಉತ್ತರಿಸಿದ ಅವರು, ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೆಂಗಳೂರು ಜಿಬಿಎ ಸೇರಿ ರಾಜ್ಯದ ಜಿಪಂ, ತಾಪಂ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆೆಗಳಿಗೆ ಈ ವರ್ಷವೇ ಚುನಾವಣೆ ನಡೆಯುತ್ತದೆ ಎಂದು ಹೇಳಿದರು.
2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನ ಮೂಲಕ ನಾವು ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.
ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿಿರುವ ವಿಶ್ವಾಾಸ ನಮ್ಮ ಆತ್ಮವಿಶ್ವಾಾಸ ಹೆಚ್ಚಿಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿಿದೆ ಎಂದು ಹೇಳಿದರು.
ನನ್ನ 35 ವರ್ಷಗಳ ರಾಜಕಾರಣದಲ್ಲಿ ಬೆಂಗಳೂರಿಗೆ ಇಷ್ಟು ದೊಡ್ಡ ಕಾರ್ಯಕ್ರಮಗಳನ್ನು ಹಮ್ಮಿಿಕೊಂಡಿರಲಿಲ್ಲ. ಪ್ರಧಾನಮಂತ್ರಿಿಗಳು ಕೂಡ ಬೆಂಗಳೂರಿಗೆ ಬಂದಾಗ ಈ ನಗರವನ್ನು ಕೊಂಡಾಡಿದರು. ಅವರು ನಮ್ಮ ನಗರಕ್ಕೆೆ ಅನುದಾನ ನೀಡದಿದ್ದರೂ ನಾವು ಈ ನಗರಕ್ಕೆೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ ಜನ 2025ಕ್ಕೆೆ ಬೀಳ್ಕೊೊಡುಗೆ ನೀಡಿ, 2026ರ ವರ್ಷವನ್ನು ಸ್ವಾಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡ ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದ ಇಡೀ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಹೆಬ್ಬಾಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಾಟನೆ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಾಗಿ ಹೆಬ್ಬಾಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ದೂರು ಹೇಳುತ್ತಿಿದರು. ಹೀಗಾಗಿ ನಾವು ತ್ವರಿತ ಗತಿಯಲ್ಲಿ ಪರಿಹಾರ ಕಂಡು ಹಿಡಿದಿದ್ದೇವೆ. ಆ ಮೂಲಕ ಸಂಚಾರ ದಟ್ಟಣೆ ನಿವಾರಿಸಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ಅಭಿವೃದ್ಧಿಿ ಪ್ರಾಾಧಿಕಾರ (ಬಿಡಿಎ) ಈ ವರ್ಷ ಐವತ್ತನೇ ವಸಂತಕ್ಕೆೆ ಕಾಲಿಟ್ಟಿಿದ್ದು, ನನ್ನ ರಾಜಕೀಯ ಜೀವನದಲ್ಲಿ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಿಕೊಂಡಿದೆ. 120 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಬಿಬಿಸಿ) ಅನ್ನು ಕಾರ್ಯರೂಪಕ್ಕೆೆ ತರಲು ರೈತರ ಬಳಿ ಭೂಸ್ವಾಾಧೀನ ಮಾಡಿಕೊಳ್ಳಲಾಗುತ್ತಿಿದೆ. ಇದಕ್ಕೆೆ ಶೇ.35 ವಾಣಿಜ್ಯ ಭೂಮಿಯನ್ನು ರೈತರಿಗೆ ಪರಿಹಾರವಾಗಿ ನೀಡಲಾಗುತ್ತಿಿದೆ. ಜತೆಗೆ ಸಣ್ಣ ಟೌನ್ ಶಿಪ್ ನಿರ್ಮಾಣಕ್ಕೆೆ ರೈತರಿಗೆ ಉತ್ತಮ ಪರಿಹಾರ ನೀಡುತ್ತಿಿದ್ದೇವೆ.
ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆೆ ಬರಲಿದೆ. ಮೇಕ್ರಿಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆೆ (ಒಆರ್ ಆ್ಯ್ೂ) ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.
ಸಚಿವ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾಾರಿಸ್, ಆಯುಕ್ತ ಮಣಿವಣ್ಣನ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿಿತರರು ಜತೆಗಿದ್ದರು.
ನೈಸ್ ನವರಿಗೆ ಪಾಠ ಕಲಿಸುವುದು ಗೊತ್ತಿಿದೆ:
ನೈಸ್ ಸಂಸ್ಥೆೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆೆ ಅವರು ತಕರಾರು ಎತ್ತಿಿದ್ದಾರೆ. ನೈಸ್ ನವರು ತಾವು ಸರ್ಕಾರಕ್ಕಿಿಂತ ದೊಡ್ಡವರು ಎಂದು ಭಾವಿಸಿದ್ದಾರೆ. ಹೀಗಾಗಿ ಬೇರೆ ದಾರಿ ಹುಡುಕುತ್ತೇವೆ. ಅವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ಗೊತ್ತಿಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಹೀಗಾಗಿ ಸ್ಕೈಡೆಕ್ ಗಾಗಿ ನಾವು ಬೇರೆ ಕಡೆ ಬಿಡಿಎ ಜಾಗ ಗುರುತಿಸಿದ್ದೇವೆ. ವಿಮಾನ ಹಾರಾಟದ ಟವರ್ ಸಮಸ್ಯೆೆ ಇರುವ ಕಾರಣ, ಇದನ್ನು ಸೂಕ್ತ ಜಾಗದಲ್ಲಿ ನಿರ್ಮಿಸುತ್ತೇವೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ