Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೈಕ್ಷಣಿಕ ಪೋತ್ಸಾಹದಿಂದ ಮಕ್ಕಳಲ್ಲಿ ಸೇವಾ ಮನೋಭವ ಜಾಗೃತಿ : ಉಪ ನಿರ್ದೇಶಕಿ ಪ್ರೇಮ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಆ.24 : ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಿದರೇ ಭವಿಷ್ಯದಲ್ಲಿ ಅವರು ಸಮಾಜದ ಗುರುತಿಸಿಕೊಂಡು, ಸೇವಾ ಮನೋಭಾವ ಬೆಳೆಸಿಕೊಳ್ಳುತ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಯಲಿಯೂರು ಗ್ರಾಮದಲ್ಲಿರುವ ಪರಿಶಿಷ್ಟ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಲಿಕಾ ಪರಿಕರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರ್ಥಿಕವಾಗಿ ಸಶಕ್ತರಾಗಿರುವವರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಹಾಗೂ ಅನುಕರಣೀಯ ಕೆಲಸ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹಾಸ್ಟಲ್ ಗೆ ಸೇರಿಸಲು ಗ್ರಾ.ಪಂ ಸದಸ್ಯರು ಪ್ರೋತ್ಸಾಹಿಸಬೇಕು ಪ್ರತಿಯೊಂದು ವಸತಿ ಶಾಲೆಯಲ್ಲಿಯೂ ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ಆಹಾರದ ಮೆನು ಬದಲಾವಣೆ ಮಾಡಲಾಗಿದೆ. ಸಂಜೆ ವೇಳೆಯಲ್ಲಿ ವಿಶೇಷ ತರಗತಿ ಆರಂಭಿಸಿದ್ದು, ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಯೋಜನೆ ಸಿದ್ಧವಿದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರ ಸಾಕಷ್ಟು ಬೆಂಬಲ ನೀಡುತ್ತಿದ್ದು, ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಾರ್ಷಿಕವಾಗಿ ವಿದ್ಯಾರ್ಥಿ ವೇತನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್ ಸೇರಿದಂತೆ ವಿದೇಶದಲ್ಲಿ ವ್ಯಾಸಂಗ ಮಾಡಲು 1 ಕೋಟಿಯ ವರೆಗೂ ಸಹಾಯಧನ ನೀಡಲಾಗುತ್ತದೆ' ಎಂದರು.

ಕೆಡಿಪಿ ಸದಸ್ಯರಾದ ಮುನಿಕೃಷ್ಣಪ್ಪ ಮಾತನಾಡಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪ್ರತಿಯೊಬ್ಬ ಮಗುವನ್ನು ಸರ್ಕಾರಿ ಸೌಲಭ್ಯದ ಅಡಿಯಲ್ಲಿ ಉತ್ತಮವಾದ ವಿದ್ಯಾಭ್ಯಾಸ ಕೊಡಿಸಲು ಪೋಷಕರು ಮುಂದಾಗಬೇಕು. ಗುಣಮಟ್ಟದ ಶಿಕ್ಷಣದಿಂದ ಭವಿಷ್ಯದ ಯುವಕರನ್ನು ಪ್ರಬುದ್ಧರನ್ನಾಗಿಸಬೇಕಿದೆ ಎಂದರು.

ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ನಳಿನಾಕ್ಷಿ, ಯಲಿಯೂರು ಗ್ರಾಪಂ ಅಧ್ಯಕ್ಷೆ ಆಂಜಿನಮ್ಮ, ಉಪಾಧ್ಯಕ್ಷ ಪ್ರಿಯಾಂಕ ಮೋಹನ್ , ವಾರ್ಡನ್ ಬಸವರಾಜ್, ಮುಖಂಡರಾದ ಆನಂದ್ ಗೌಡ, ಮಾಜಿ ತಾಲ್ಲೂಕು ಅಧ್ಯಕ್ಷ ಹನುಮಂತ ರಾಯಪ್ಪ, ಮಾನ್ಯ ವೇಂಚರ್ಸ್ ಹಾಗೂ ಪರಿಕರ ವಿತರಣೆ ದಾನಿಗಳಾದ ಶ್ರೀನಿವಾಸ ರೆಡ್ಡಿ, ಸಂತೋಷ್, ಪೃಥ್ವಿ ರೆಡ್ಡಿ, ಕೋರಮಂಗಲ, ಆಂಜಿನಪ್ಪ, ಪಿಳ್ಳೆಗೌಡ, ನವೀನ್ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ