Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ: ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ನಾಮಪತ್ರ




ಸುದ್ದಿಮೂಲ ವಾರ್ತೆ
ದೇವನಹಳ್ಳಿ, ಏ.17: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರು ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದರು.

ದೇವನಹಳ್ಳಿ ತಾಲ್ಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಈಗಾಗಲೇ ಜನತೆ ಬಿಜೆಪಿ ಪಕ್ಷದ ಕಡೆ ಒಲವು ಹೊಂದಿದ್ದಾರೆ. ಕಾರಣ ನಾನು ದೇವನಹಳ್ಳಿ  ತಾಲ್ಲೂಕಿನ ಶಾಸಕನಾದಾಗ ಮಾಡಿರುವಂತಹ ಅಭಿವೃದ್ಧಿ ಕೆಲಸಗಳನ್ನು ಯಾರೂ ಮರೆತಿಲ್ಲ. ಆದ್ದರಿಂದಲೇ ಜನತೆ ಅದನ್ನು ಗಮನದಲ್ಲಿಟ್ಟುಕೊಂಡು ನಾನು ಬಿಜೆಪಿ ಸೇರ್ಪಡೆಯಾದ ನಂತರ ಸಾಕಷ್ಟು ಜನತೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ತಾಲ್ಲೂಕಿನಲ್ಲಿ ಮತ್ತಷ್ಟು ಬಿಜೆಪಿ ಪಕ್ಷವನ್ನು ಬಲಪಡಿಸಿದ್ದಾರೆ. ತಾಲ್ಲೂಕಿನ ಜನ ನನ್ನನ್ನು ಜಯಗೊಳಿಸುವರು ಎಂಬ ನಂಬಿಕೆ ಬಹಳ ಇದೆ ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಅಭಿವೃದ್ಧಿ ಕೆಲಸಗಳನ್ನು ಮಾಡುವುದನ್ನು‌ ಮರೆತು ಬೇರೆಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಸಮಾಜ ಸೇವೆ ಎಂಬ ಹೆಸರಲ್ಲಿ ಈಗಾಗಲೇ ತಾಲ್ಲೂಕಿನ ಜನತೆಗೆ ಮೋಸ ಮಾಡಿದ್ದಾರೆ. ತಮಗೆ ಬೇಕಾದವರಿಗೆ ಮಾತ್ರ ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದಲೇ ಜನ ಗಮನದಲ್ಲಿಟ್ಟುಕೊಂಡು ಈ ಬಾರಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ  ಮಾಜಿ ಶಾಸಕ ಜಿ.ಚಂದ್ರಣ್ಣ, ಅಶ್ವಥ್ ನಾರಾಯಣ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ ನಾರಾಯಣಸ್ವಾಮಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜು, ವಿಶ್ವನಾಥಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಿನಯ್, ದೇವನಹಳ್ಳಿ ಬಿಜೆಪಿ ಟೌನ್ ಅಧ್ಯಕ್ಷ ಸಂದೀಪ್, ದೇವನಹಳ್ಳಿ ನಗರ ಪ್ರಧಾ‌ನ ಕಾರ್ಯದರ್ಶಿ ಭರತ್ ಇನ್ನೂ ಅನೇಕ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ