Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಾಧ್ಯಕ್ಷರಾಗಿ ಎಚ್‌ಡಿಕೆ ಅವಿರೋಧ ಆಯ್ಕೆೆ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.22:
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಾಮಿ ಅವರು ಅವಿರೋಧವಾಗಿ ಪುನರಾಯ್ಕೆೆ ಆಗಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆೆ ಬಗ್ಗೆೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.
ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ. ಈ ಹಿನ್ನೆೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆೆ ರಾಷ್ಟ್ರೀಯ ಮಂಡಳಿ ಬಂದಿತು.
ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಿಗೂ ಗಟ್ಟಿಿಯಾಗಿ ಉಳಿದಿದೆ. ಅಸಂಖ್ಯಾಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆೆ ಮೀಸಲು ಇರಿಸಿದ್ದಾರೆ. ಬೆಳ್ಳಿಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.
ನಿಖಿಲ್ ಕುಮಾರಸ್ವಾಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಿಯಾಗಿ ಮುಂದುವರಿದ್ದು, ಇದಕ್ಕೆೆ ಸಭೆಯಲ್ಲಿ ಮೆಚ್ಚುಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಿಯ ಬಗ್ಗೆೆ ಶ್ಲಾಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆೆಯೊಂದಕ್ಕೆೆ ಉತ್ತರ ನೀಡಿದರು.
ಎರಡು ಪ್ರಮುಖ ನಿರ್ಣಯ ಅಂಗೀಕಾರ:
ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ಹಾಗೂ ಪಕ್ಷ ಸಂಘಟನೆ ಮಾಡುವ ಬಗ್ಗೆೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳಿಗೆ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಸುರೇಶ್ ಬಾಬು ಅವರು ಹೇಳಿದರು.
ಯುವ ಜನತಾದಳ ರಾಜ್ಯಾಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾಾರೆಡ್ಡಿಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ, ಜೆಡಿಎಸ್ ಐಟಿ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ