Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ : ಧರ್ಮಣ್ಣ ದೊಡ್ಮನಿ 

ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ : ಧರ್ಮಣ್ಣ ದೊಡ್ಮನಿ



ಜೇವರ್ಗಿ :ನಾನು ರಾಜಕೀಯಕ್ಕೆ ವೈಯುಕ್ತಿಕವಾಗಿ ಏನನ್ನೋ ಪಡೆಯಬೇಕೆಂದು ಬಂದವನಲ್ಲ. ಜನರಿಗಾಗಿ ಏನಾದರು ಮಾಡೋಣ ಎಂದು ಬಂದವನು.

ಕಳೆದ 34 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷ ಸಂಘಟಿಸುತ್ತ ಹಾಗೂ ಜೇವರ್ಗಿ ವಿಧಾನಸಭಾ ಮತಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ .

ಜನರ ಕಷ್ಟವನ್ನು ಹತ್ತಿರದಿಂದ ನೋಡಿ ನನ್ನ ಜೀವನದುದ್ದಕ್ಕೂ ಜನ ಸೇವೆಯಲ್ಲೇ ತೊಡಗಿಸಿಕೊಳ್ಳಬೇಕೆಂದು ನಿರ್ಧರಿಸಿದೆ.

ಜೇವರ್ಗಿ ಕ್ಷೇತ್ರದಲ್ಲಿ ನಾನು ಮಾಡಿದ ಸೇವೆಗೆ ಸಿಕ್ಕ ಜನಾಶೀರ್ವಾದವೇ ಸಾಕು.

ರಾಜಕೀಯ ನನಗೆ ವ್ಯಾಪಾರವು ಅಲ್ಲ, ಜೀವನವು ಅಲ್ಲ ಕೇವಲ ಒಂದು ಸೇವಾ ಕ್ಷೇತ್ರ ಮಾತ್ರ. ಅದ್ದುದ್ದರಿಂದ ಬಿಜೆಪಿ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತಿದ್ದೆನೆ .

ಜೇವರ್ಗಿ ಕ್ಷೇತ್ರದ ಜನರು ಕರೆ ಮಾಡಿ ಅವರ ಭಾವನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿಮ್ಮ ನಿರೀಕ್ಷೆಯಂತೆ ನನಗೆ ಈ ಬಾರಿ ನಿಮ್ಮನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿಲ್ಲ. ಹಾಗೆಂದು ನಾನು ನಿಮ್ಮ ಸೇವೆಯನ್ನು ಮತ್ತು ನಿಮ್ಮ ಪರವಾಗಿ ಹೋರಾಟವನ್ನು ನಿಲ್ಲಿಸುವುದಿಲ್ಲ.

"ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದಂತೆ ಫಲಾಪೇಕ್ಷೆ ಇಲ್ಲದೆ ಕರ್ಮ ಮಾಡು" .

 

ನನ್ನನ್ನು ನಂಬಿ ನನ್ನೊಂದಿಗೆ ಹೋರಾಟದಲ್ಲಿ ಮತ್ತು ಸೇವೆಯಲ್ಲಿ ಹೆಗಲಿಗೆ ಹೆಗಲು ಕೊಟ್ಟ ನನ್ನೆಲ್ಲ ಕಾರ್ಯಕರ್ತ ಬಂಧುಗಳಿಗೆ ನಾನು ಸದಾ ಚಿರಋಣಿ.

ದೇಶ ಮತ್ತು ಧರ್ಮ ಉಳಿಯಬೇಕೆಂದರೆ ನಮ್ಮ ಬಿಜೆಪಿ ಪಕ್ಷ ಅಧಿಕಾರದಲ್ಲಿರಬೇಕು. ಈ ಬಾರಿಯ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚನೆಗೆ ಶ್ರಮಿಸೋಣ. ದೇಶ ಮೊದಲು. ಪಕ್ಷ ನಂತರ. ವ್ಯಕ್ತಿ ಕೊನೆಗೆ. ಧರ್ಮಣ್ಣ ದೊಡ್ಡಮನಿ ಗಂವ್ಹಾರ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ