Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಚಾಲನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.24: ಸೊಳ್ಳೆಗಳಿಂದ ಹರಡುವ ಡೆಂಗೆ ಜ್ವರದ ಲಕ್ಷಣಗಳು, ಜ್ವರ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ ಜನಸಮುದಾಯದಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡ ಡೆಂಗೆ ರಥ ಜನ ಜಾಗೃತಿ ಯಾತ್ರೆಯ ಚಾಲನೆ ಕಾರ್ಯಕ್ರಮ ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಡೆಂಗೆ ರಥ ಜನ ಜಾಗೃತಿ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಈ ವರ್ಷ ಡೆಂಗೆ ರಥ ಕಾರ್ಯಕ್ರಮ ಆಯೋಜಿಸಲಾಗಿದ್ದು, ಡೆಂಗೆ ಪ್ರಸಾರದ ಅವಧಿಯ ಎರಡು ತಿಂಗಳು ಡೆಂಗಿ ರಥ ಜಿಲ್ಲೆಯಾಧ್ಯಂತ ಸಂಚರಿಸಲಿದೆ.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ್ ಕೆ ಅವರು ಮಾತನಾಡಿ, ಡೆಂಗೆ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ, ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿ ತಡೆಗಟ್ಟಲು, ಮನೆಗಳ ಸುತ್ತಲು ಸ್ವಚ್ಛತೆ ಕಾಪಾಡಬೇಕು. ಈಡೀಸ್ ಲಾರ್ವಾ ಸಮೀಕ್ಷೆಗಾಗಿ ಮನೆ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಎಲ್ಲಾ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಜಿಲ್ಲಾ ವಿ.ಬಿ.ಡಿ ಸಲಹೆಗಾರರಾದ ರಮೇಶ್ ಕೆ ಅವರು ಮಾತನಾಡಿ, ಮಳೆಗಾಲ ಮತ್ತು ನಂತರದ ಸಂದರ್ಭದಲ್ಲಿ ಅತಿ ಹೆಚ್ಚಿನ ಸೊಳ್ಳೆ ಉತ್ಪತ್ತಿ ತಾಣಗಳು ಉಂಟಾಗಿ ಮತ್ತು ಕೆಲವು ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ. ಅದರಲ್ಲೂ ಡೆಂಗೆ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಒಳಗಡೆ ಕಚ್ಚುವುದರಿಂದ ಡೆಂಗೆ ಹರಡುವ ಸಾಧ್ಯತೇ ಇರುತ್ತದೆ. ಕಾರಣ ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಲು ಹಾಗೂ ಮಲಗುವಾಗ ಸೊಳ್ಳೆಪರದೆ ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿ ಮಾಡಿ ಸ್ವಚ್ಚಗೊಳಿಸಿ ನೀರು ತುಂಬಿ ಮುಚ್ಚಿಡಲು ಹಾಗೂ ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣ ವಿಧಾನಗಳನ್ನು ಸಾರ್ವಜನಿಕರು ಅನುಸರಿಸಬೇಕು. ಡೆಂಗೆ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಪ್ರಕಾಶ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ ನಂದಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ ರಾಮಾಂಜನೇಯ ಹಾಗೂ ಡಾ. ರಚನಾ, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಸೇರಿದಂತೆ ಕೊಪ್ಪಳ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿಯ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.

ಎರಡು ತಿಂಗಳು ಸಂಚಾರ:ಮೊದಲ ದಿನ ಕೊಪ್ಪಳ ನಗರದಾದ್ಯಂತ ಸಂಚರಿಸಿದ ಡೆಂಗಿ ರಥ ವಾಹನದಲ್ಲಿ ಡೆಂಗೆ ಸ್ತಬ್ಧ ಚಿತ್ರಗಳನ್ನು ಹಾಗೂ ಡೆಂಗೆ ಜಾಗೃತಿ ಸಂದೇಶ ಮತ್ತು ಗೀತೆಗಳನ್ನು ಬಿತ್ತರಿಸಲಾಯಿತು. ಡೆಂಗೆ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ಹಾಗೂ ಬಿತ್ತಿಪತ್ರಗಳನ್ನು ಪ್ರದರ್ಶಿಸುವುದ ಮೂಲಕ ನಗರದಲ್ಲಿ ಜಾಗೃತಿ ಕಾರ್ಯವನ್ನು ಯಶಸ್ವಿಯಾಗಿ ಕೈಗೊಳ್ಳಲಾಯಿತು. ಈ ಡೆಂಗಿ ರಥ ವಾಹನವು ಎರಡು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ