Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಎಲ್‌. ಸಂತೋಷ್‌ ಪಡೆ ತೋಡಿದ ಖೆಡ್ಡಾಕ್ಕೆ ಸೋಮಣ್ಣ ಬಿದ್ದರಾ?

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 14: ಬಿಜೆಪಿಯ ರಾಷ್ತ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರು ಬೀಸಿದ ಖೆಡ್ಡಾಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಬಿದ್ದರಾ? ಇಂತಹ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ದ ಸ್ವಜಾತಿಯ ಸೋಮಣ್ಣ ಅವರನ್ನು ಎತ್ತಿಕಟ್ಟಿ ಆಟ ನೋಡುವ ಬಿ.ಎಲ್.ಸಂತೋಷ್ ಪಡೆಯ ಆಟದ ಭಾಗವಾಗಿಯೇ ಸೋಮಣ್ಣ ಅವರನ್ನು ವರುಣ ಮತ್ತು ಚಾಮರಾಜ ಕ್ಷೇತ್ರಗಳಲ್ಲಿ ನಿಲ್ಲಿಸಿದ್ದು ಎಂಬ ಮಾತು ಕೇಳಿ ಬರುತ್ತಿದೆ.

ಲಿಂಗಾಯತರ ನಾಯಕ ಯಡಿಯೂರಪ್ಪ ಮಾತ್ರವಲ್ಲ, ಸೋಮಣ್ಣ ಕೂಡ ಆ ಸಮುದಾಯದ ನಾಯಕ ಎಂದು ಬಿಂಬಿಸುವ ತಂತ್ರಕ್ಕೆ ಯಡಿಯೂರಪ್ಪ ಅಭಿಮಾನಿ ಪಡೆ ಪ್ರತಿತಂತ್ರ ಹೆಣೆದು, ಯಡಿಯೂರಪ್ಪ ‌ಮತ್ತು ವಿಜಯೇಂದ್ರ ಸೋಮಣ್ಣ ಪರ ಇಲ್ಲ. ಎರಡೂ‌ ಕ್ಷೇತ್ರಗಳಲ್ಲಿ ಅವರನ್ನು ಸೋಲಿಸಲು  ತೆರೆ ಮರೆಯಲ್ಲಿ ಸಂದೇಶ ರವಾನಿಸಿದ್ದಾರೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ.

ಅದನ್ನು ಅಲ್ಲಗಳೆಯುವಂತ 'ಚರ್ಚೆ'ಯನ್ನು ಹುಟ್ಟು ಹಾಕುವಲ್ಲಿ ಸೋಮಣ್ಣ ಪಡೆ ಸೋತಿತು. ವಿಜಯೇಂದ್ರ ಅಭಿಮಾನಿಗಳ ಮೇಲೆ ‘ನಿಗಾ’ ಮಾಡದೇ ಹೋಗಿ ಒಳ ಹೊಡೆತ ಅನುಭವಿಸಿದರು ಎಂಬ ಅಸಮಾಧಾನ ಸೋಮಣ್ಣ ಅಭಿಮಾನಿಗಳಲ್ಲಿ ವ್ಯಕ್ತವಾಗಿದೆ.

ಎತನ್ಮಧ್ಯೆ ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಸೋಲಿಸಲೇಬೇಕೆಂದು ವಿ.ಸೋಮಣ್ಣರನ್ನು ಕಣಕ್ಕಿಳಿಸಿದ್ದ ಬಿಜೆಪಿ ನಾಯಕರಿಗೆ ಕೊನೆಗೂ ಮುಖಭಂಗವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ