Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸಮರ್ಪಕ ವಿದ್ಯುತ್ ಸರಬರಾಜು ವಿರೋಧಿಸಿ ರೈತರ ವಿಭಿನ್ನ ಪ್ರತಿಭಟನೆ 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಆ.21 : ಕೃಷಿ ಪಂಪ್‍ಸೆಟ್‍ಗಳಿಗೆ ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಹಸಿರು ಸೇನೆ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತರು ಇಲ್ಲಿನ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರೈತರು ಪ್ರತಿಭಟನಾ ಸ್ಥಳದಲ್ಲೇ ಒಲೆ ಹಚ್ಚಿ ಅಡುಗೆ ಮಾಡಿ ಊಟ ಮಾಡಿದರು, ಅಲ್ಲದೇ, ಬೆಸ್ಕಾಂ ಇಲಾಖೆಯ ಅಧಿಕಾರಿ ಸಿಬ್ಬಂದಿಗೂ ಉಣಬಡಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ಇತೀಚೆಗೆ ಕಳೆದ 20 ದಿನಗಳಿಂದಲೂ ವಿದ್ಯುತ್ ಪೂರೈಕೆಯಲ್ಲಿ ಬಹಳ ವ್ಯತ್ಯಾಸವಾಗಿದೆ. ಕೇವಲ ದಾಖಲೆಗಳಲ್ಲಿ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಆಗಿದೆ ಎಂದು ವರದಿ ಇರುತ್ತದೆ. ವಾಸ್ತವದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ದುರಸ್ತಿ ಇದ್ದಾಗ ತೆಗೆಯುವ ವಿದ್ಯುತ್ ಸಂಪರ್ಕವನ್ನು ಮತ್ತೆ ಕೊಡಬೇಕು ಆದರೆ ಅದನ್ನು ಕೊಡುತ್ತಿಲ್ಲ. ಹಿರಿಯ ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಾರೆ. ಆದರೆ, ಸಿಬ್ಬಂದಿಗಳು ಅಧಿಕಾರಿಗಳ ಮಾತನ್ನು ಕೇಳುತ್ತಿಲ್ಲ. ರೈತರು ಕರೆ ಮಾಡಿದರೆ ಕರೆ ಸ್ವೀಕರಿಸೊಲ್ಲ ಎಂದು ದೂರಿದರು.

ವಿದ್ಯುತ್‍ ಅಸಮರ್ಪಕ ಪೂರೈಕೆಯಿಂದ ರೈತರ ಬೆಳೆಗಳು ಒಣಗಿ ನಾಶವಾಗುತ್ತಿವೆ. ಇದೇ ಪರಿಸ್ಥಿತಿ ಮುಂದುವರೆದರೆ ರೈತರಿಗೆ ಆಗುವ ನಷ್ಟವನ್ನು ಇಲಾಖೆಯಿಂದಲೇ ಭರಿಸಿಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೃಷಿ ಪಂಪ್ ಸೆಟ್‍ಗಳಿಗೆ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಪ್ರತಿ ದಿನ ಸಂಜೆ 6 ರಿಂದ 9 ಗಂಟೆಯ ವೇಳೆ ತಪ್ಪದೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.

ಚಿಂತಾಮಣಿ ಉಪ ವಿಭಾಗದ ಇಇ ಶೋಭ ಮಾತನಾಡಿ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಈಗಲೂ ತ್ರಿಫೇಸ್ ವಿದ್ಯುತ್ತನ್ನು ಕೃಷಿ ಪಂಪ್‍ಸೆಟ್‍ಗಳಿಗೆ ಪೂರೈಸಲು ಬದ್ದರಾಗಿದ್ದೇವೆ, ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಕಳೆದ ಐದಾರು ದಿನಗಳಿಂದ ಅಡಚಣೆ ಆಗಿರುವ ಬಗ್ಗೆ ವಿವರ ಪಡೆದುಕೊಂಡು ನಂತರ ಸರಿಪಡಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ