Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಪ್ರಯಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ: ದಿನೇಶ್ ಗೂಳಿಗೌಡ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.18: ಸ್ತ್ರೀ ಸಬಲೀಕರಣಕ್ಕೆ "ಶಕ್ತಿ" ತುಂಬಿದ ಉಚಿತ ಪ್ರಯಾಣ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ಇದು ಮಾತೆಯರ ಪಾಲಿನ ಶಾಶ್ವತ ಯೋಜನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಮುಖ್ಯಸ್ಥ ದಿನೇಶ್ ಗೂಳಿಗೌಡ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಮಸ್ತ ಸ್ತ್ರೀ ಸಂಕುಲಕ್ಕೆ ಯೋಜನೆ ಸೌಲಭ್ಯ ಸೌಲಭ್ಯ ಸಿಗಲಿದ್ದು, ನೂಕುನುಗ್ಗಲು ಬೇಡ ಸಾವಧಾನವಾಗಿ ಪ್ರಯಾಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದರೂ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಪ್ರಣಾಳಿಕೆಯಲ್ಲಿ ನೀಡಿದಂತೆ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವನ್ನು ಅಧಿಕಾರಕ್ಕೆ ಬಂದ ತಿಂಗಳೊಳಗೆ ಈಡೇರಿಸಿದೆ. ಮಹಿಳಾ ಸಬಲೀಕರಣದ ಬಗ್ಗೆ ಹಲವರು ಮಾತನಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ನೀಡಿದೆ. ಅಕ್ಷರಶಃ ಸ್ತ್ರೀ ಶಕ್ತಿಗೆ ಹೊಸ "ಶಕ್ತಿ", ಚೈತನ್ಯವನ್ನು ತುಂಬಿದೆ ಎಂದು ದಿನೇಶ್ ಗೂಳಿಗೌಡ ಅಭಿಪ್ರಾಯಪಟ್ಟಿದ್ದಾರೆ.

ಶಕ್ತಿ ಯೋಜನೆಯಿಂದ ಎಲ್ಲ ವರ್ಗದ ಮಹಿಳೆಯರಿಗೆ ಅನುಕೂಲವಾಗಿದೆ. ಗಾರ್ಮೆಂಟ್ ಫ್ಯಾಕ್ಟರಿಗೆ ಹೋಗುವವರು. ಮನೆ ಕೆಲಸಕ್ಕೆ ಹೋಗುವವರು, ಮಹಿಳಾ ಪೌರ ಕಾರ್ಮಿಕರು, ವಿದ್ಯಾರ್ಥಿನಿಯರು, ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ತೆರಳುವವರಿಗೆ, ಮಾತ್ರವಲ್ಲ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಮಹಿಳೆಯರಿಗೆ, ತವರು ಮನೆಗೆ ತೆರಳುವ ತಾಯಂದಿರಿಗೆ, ಯುವತಿಯರು, ಗೃಹಿಣಿಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಶಕ್ತಿ ಯೋಜನೆ ಜಾರಿಯಾದಾಗಿನಿಂದ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಶೇಕಡಾ 32ರಷ್ಟು ಹೆಚ್ಚಿದೆ. ಜೂ. 11 ರಂದು ಯೋಜನೆ ಜಾರಿಯಾಗಿದೆ. ಈ ಮೊದಲು ರಾಜ್ಯದ ನಾಲ್ಕು ನಿಗಮಗಳಲ್ಲಿ ಪ್ರತಿ ದಿನ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.‌ ಈಗ 1.10 ಕೋಟಿ ಜನ ಸರಾಸರಿ ಪ್ರಯಾಣ ಮಾಡುತ್ತಿದ್ದಾರೆ‌. ಮಹಿಳೆಯರ ಪ್ರಯಾಣವೂ ಹೆಚ್ಚಳವಾಗಿದ್ದು, ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಕ್ಕಿದೆ. ಅಂಕಿ ಅಂಶಗಳು ಯೋಜನೆಯ ಯಶಸ್ಸನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ