Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಮುಂದಿನ ಕ್ರಮ 

ಸುದ್ದಿಮೂಲ ವಾರ್ತೆ

ಬೆಂಗಳೂರು ನ 15: ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ, ಕಾರ್ಯಕ್ರಮದಲ್ಲಿ "ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ" ಅವರ ಗೌರವ ಗ್ರಂಥ ಲೋಕಾರ್ಪಣೆಗೊಳಿಸಿ ಕೆ.ಎಂ.ಎಸ್ ದಂಪತಿಯನ್ನು ಅಭಿನಂದಿಸಿ ಮಾತನಾಡಿದರು.

ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರವಾದ ಚಳವಳಿಗಳು ಸಮಾಜಕ್ಕೆ ಅತ್ಯಗತ್ಯ. ಇಂಥಾ ಪ್ರತಿಭಟನೆ, ಚಳವಳಿಗಳನ್ನು ನಾನು ಬೆಂಬಲಿಸುತ್ತೇನೆ. ಸ್ಬಾಗತಿಸುತ್ತೇನೆ. ಆದಷ್ಟು ಶೀರ್ಘವಾಗಿ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಟೌನ್ ಹಾಲ್ ಎದುರು ಮತ್ತೆ ಪ್ರತಿಭಟನೆಗಳಿಗೆ, ಹೋರಾಟಗಳಿಗೆ ಅವಕಾಶ ಆಗುವ ದಿಕ್ಕಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮಾನತೆ ತುಂಬಿರುವ ಜಡ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಈ ಬದಲಾವಣೆ ಜನಪರ ಹೋರಾಟ, ಚಳವಳಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರತೆಯಿಂದ ಕೂಡಿದ ಹೋರಾಟ, ಪ್ರತಿಭಟನೆಗಳು ನಡೆಯಬೇಕು ಎಂದರು.

ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಹೋರಾಟಗಳಿಗೆ ಸ್ವಾಗತಿಸುವುದು ಮಾತ್ರವಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ. ಬಸವಣ್ಣನವರ ಕೆಲವು ಆರಾಧಕರು ಬಸವಣ್ಣರ ವೈಚಾರಿಕತೆಯನ್ನು ಆಚರಿಸುವುದಿಲ್ಲ. ಮೌಡ್ಯವಿರೋಧಿ ಬಸವಣ್ಣನವರ ಮೌಲ್ಯಗಳನ್ನು ಆಚರಿಸುವುದಿಲ್ಲ. ಆದರೆ ಕೆ.ಮರುಳಸಿದ್ದಪ್ಪ ಅವರು ನಿಜವಾದ ಶರಣರು. ನುಡಿದಂತೆ, ಬರೆದಂತೆ ಬದುಕುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಡಾ. ಕೆ.ಎಂ.ಎಸ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ , ಅಭಿನಂದನಾ ಗ್ರಂಥದ ಸಂಪಾದಕರಾದ ಎಚ್.ದಂಡಪ್ಪ, ಶ್ರೀನಿವಾಸ್ ಜಿ.ಕಪ್ಪಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

ಬಿಜೆಪಿ ವಿರೋಧಿಸಿ ನಾವು-ದೇವೇಗೌಡರು ಜೆಡಿಎಸ್ ಮಾಡಿದೆವು. ಆಮೇಲೆ ನನ್ನನ್ನು ಉಚ್ಛಾಟಣೆ ಮಾಡಿಬಿಟ್ಟರು. ಆ ಸಂದರ್ಭದಲ್ಲಿ ನಾನು ಕೆ.ಮರುಳಸಿದ್ದಪ್ಪ ಅವರನ್ನು ಭೇಟಿಯಾದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ