Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು ಭಾಗಿಯಾದರೆ ಸೇವೆಯಿಂದ ವಜಾ: ಪರಂ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.23:
ಪೊಲೀಸರು ಅಪರಾಧ ಚಟುವಟಿಗಳಲ್ಲಿ ಭಾಗಿಯಾದರೆ ಅವರನ್ನು ಸೇವೆಯಿಂದ ಮುಲಾಜಿಲ್ಲದೆ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ನಗದು ದರೋಡೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಇನ್ನು ಕೆಲವರು ಸಿಗಬೇಕಿದೆ. ಪ್ರಕರಣದಲ್ಲಿ ಪೊಲೀಸ್ರೊೊಬ್ಬರು ಭಾಗಿಯಾಗಿದ್ದಾರೆ. ಮೂರು ವಿಶೇಷ ತಂಡಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.
ನಗರ ಪೊಲೀಸ್ ಆಯುಕ್ತರು ಸೇರಿದಂತೆ ಪ್ರಕರಣದ ಜವಾಬ್ದಾಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ಇಂಥ ಘಟನೆಯಾದಾಗ ಯಾರು ಕೂಡ ನಂಬಲು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಕೆಟ್ಟ ಹೆಸರು ಬರುವ ರೀತಿ ಕೃತ್ಯ ಅಗಿತ್ತು. ಈ ಘಟನೆ ಪೊಲೀಸ್ ಇಲಾಖೆಗೂ ಸವಾಲಾಗಿತ್ತು. 6.29 ಕೋಟಿ ರೂ. ಹಣ ಸಿಕ್ಕಿಿದೆ. ಬಾಕಿ ಹಣ ಪತ್ತೆೆಹಚ್ಚುತ್ತಾಾರೆ ಎಂದರು.
ಈ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಿಕವಾಗಿ, ಬಹಳ ಎಚ್ಚರಿಕೆಯಿಂದ ಬುದ್ಧಿಿ ಉಪಯೋಗಿಸಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕೆಲಸ ಮಾಡಿ ಪ್ರಕರಣವನ್ನು ಬೇಧಿಸಿದ್ದಾರೆ. ದರೋಡೆ ಮಾಡಿದವರು ಬಹಳ ಎಚ್ಚರಿಕೆಯಿಂದ ಕೃತ್ಯ ಎಸಗಿದ್ದರು. ಅದೆಲ್ಲವೂ ಕೂಡ ಈಗ ತನಿಖೆಯಿಂದ ಗೊತ್ತಾಾಗುತ್ತಿಿದೆ.
ಈ ರೀತಿಯ ಕೃತ್ಯದಲ್ಲಿ ಯಾರಾದರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ನಿನ್ನೆೆ ಕೋರಮಂಗಲದಲ್ಲಿಯೂ ಘಟನೆ ನಡೆದಿದೆ. ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು.
ಏಜೆನ್ಸಿಿಯವರು ಆರ್‌ಬಿಐ ಮಾರ್ಗಸೂಚಿಗಳನ್ನು ಪಾಲಿಸಿದ್ದಾರೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿಿದೆ. ಇದಕ್ಕೆೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ