ವಣಕನಳ್ಳಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಸುದ್ದಿಮೂಲ ವಾರ್ತೆ
ಆನೇಕಲ್, ಜೂ.25: ನನ್ನ ಶಾಲೆ ನನ್ನ ಕೊಡುಗೆ ಕಾರ್ಯಕ್ರಮದಡಿ ಶಿಕ್ಷಕ ಜಿ. ನಾಗರಾಜು ಅವರು ತಾವು ಕಲಿತಂತಹ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಆನೇಕಲ್ ತಾಲೂಕು ಸರ್ಕಾರಿ ನೌಕರರ ಸಂಘದ ಖಜಾಂಚಿ ಹಾಗೂ ಇತ್ತೀಚೆಗೆ ಮುಖ್ಯ ಶಿಕ್ಷಕರಾಗಿ ಬಡ್ತಿ ಪಡೆದಿರುವ ನಾಗರಾಜು ಅವರು ತಾಲ್ಲೂಕಿನ ವಣಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮೀ, ವಣಕನಹಳ್ಳಿ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯತಿಯ ಸದಸ್ಯರುಗಳಾದ ಕಾರ್ತಿಕ್ ರೆಡ್ಡಿ, ನಾರಾಯಣಸ್ವಾಮಿ, ಎಂಟಿಎಸ್ ಅವರೊಂದಿಗೆ ಇಂದು ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡುವದೊಂದಿಗೆ ತನ್ನ ಹಳೆ ನೆನಪುಗಳನ್ನು ಮೆಲುಕು ಹಾಕಿದರು.
ಆನೇಕಲ್ ತಾಲ್ಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ. ಶಿವಣ್ಣ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಕೆ. ಚಂದ್ರಶೇಖರ್, ಖಜಾಂಚಿ ಗೋವಿಂದ್ ರಾಜ್, ಸಿಆರ್‌ಪಿಗಳಾದ ರವಿಕುಮಾರ್ ರಾಘವೇಂದ್ರ, ದಾಸಣ್ಣ, ಪತ್ರೋಸ್ ಬಿ ಐ ಆರ್ ಟಿ ಮುರಳಿ ಹಾಜರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.