Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಮನವಿ

ಸುದ್ದಿಮೂಲ ವಾರ್ತೆ

ತುಮಕೂರು ಆ.29: ಗೌರಿ ಹಾಗೂ ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ನೈಸರ್ಗಿಕ ಮೂರ್ತಿಯೊಂದಿಗೆ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ತದನಂತರ ಗೌರಿ, ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಲಾದ ಸ್ಥಳಗಳಲ್ಲಿ ವಿಸರ್ಜಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮನವಿ ಮಾಡಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ)ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ , ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ಜಲಮಾಲಿನ್ಯ ಕಾಯ್ದೆ, 1974 ರ ಪ್ರಕಾರ ಕಲಂ 33 ಎ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್. ಸೆಕ್ಷನ್1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ