Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳ್ಳ ಹಿಡಿದ ಗ್ಯಾರಂಟಿ ಯೋಜನೆಗಳು

ಸುದ್ದಿಮೂಲ ವಾರ್ತೆ

ಹಾಸನ, ನ.8: ತಮ್ಮ ಪಕ್ಷದ 18 ಶಾಸಕರೊಂದಿಗೆ ಗುರುವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಪಕ್ಷ ಮತ್ತು ಕಾಂಗ್ರೆಸ್‌ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದರು. ಗ್ಯಾರಂಟಿ ಯೋಜನೆಗಳ ಸದ್ಯದ ಸ್ಥಿತಿಗತಿ, ರಾಜ್ಯ ರಾಜಕಾರಣ, ರಾಜ್ಯದ ‍ಆರ್ಥಿಕ ಪರಿಸ್ಥಿತಿ ಮತ್ತು ಆಪರೇಷನ್‌ ಹಸ್ತ ಮತ್ತಿತರ ವಿಚಾರಗಳ ಬಗ್ಗೆ ಮಾತನಾಡುತ್ತಾ ಸಿಎಂ, ಡಿಸಿಎಂ ಮತ್ತು ಕೆಲ ಸಚಿವರ ವಿರುದ್ಧ ಕಿರಿಕಾರಿದರು.

ದೇವಿ ದರ್ಶನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಈ ಸರಕಾರ ಇನ್ನೂ 5 ವರ್ಷ ಇದ್ದರೆ ರಾಜ್ಯದ ಸಾಲದ ಪ್ರಮಾಣ 10 ಲಕ್ಷ ಕೋಟಿ ರೂಪಾಯಿ ಗಡಿ ದಾಟಬಹುದು ಎಂದು ಆತಂಕ ವ್ಯಕ್ತಪಡಿಸಿ, ವಿಶ್ವಮಾನ್ಯತೆ ಪಡೆದ ವಿತ್ತ ತಜ್ಞರು ನಮ್ಮ ಮುಖ್ಯಮಂತ್ರಿಗಳು‌. ಅವರ ಸರ್ಕಾರದಲ್ಲಿ ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಅನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು‌.

ರಾಜ್ಯ ಆರ್ಥಿಕವಾಗಿ ಅಪಾಯದ ಪರಿಸ್ಥಿತಿ ಎದುರಿಸುತ್ತಿದೆ. ಅಸಮರ್ಪಕ ನಿರ್ವಹಣೆಯಿಂದ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ದೊಡ್ಡ ಪ್ರಮಾಣದ ಸಾಲದ ಸುಳಿಗೆ ಸಿಲುಕಿಸುವ ಅಪಾಯವಿದೆ 135 ಸ್ಥಾನ ಸಿಕ್ಕರೂ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಗಬೇಕೊ, ಅಳಬೇಕೋ ಗೊತ್ತಾಗುತ್ತಿಲ್ಲ. ಬರಗಾಲಕ್ಕೆ ಸಂಬಂಧಿಸಿದಂತೆ ಲಘುವಾಗಿ ಮಾತನಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯರಿಗೆ ತರಾಟೆಗೆ ತೆಗೆದುಕೊಂಡರು.

ಒಂದೂ ಗ್ಯಾರಂಟಿ ಜಾರಿ ಆಗಿಲ್ಲ. ಜಾರಿ ಆಗಿರುವ ಗ್ಯಾರಂಟಿಗಳಿಂದ ಜನರಿಗೆ ಉಪಯೋಗ ಆಗುತ್ತಿಲ್ಲ. ಪ್ರಚಾರದಲ್ಲಿ ಕಾಲ ಕಳೆಯುತ್ತಿದೆ. ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಮಾತ್ರ ಕಾಣುವುದು ಎನ್ನುವ ಶಾಸಕ ಶಿವಲಿಂಗೇಗೌಡ ಅವರ ಅರಸಿಕೆರೆ ಕ್ಷೇತ್ರದಲ್ಲಿಯೇ ಯೋಜನೆ ಗೃಹಲಕ್ಷ್ಮಿ ಯಶಸ್ವಿಯಾಗಿ ತಲುಪಿಲ್ಲ ಎಂದು ಅಧಿಕಾರಿಗಳ ಜತೆ ಚರ್ಚೆ ಸ್ವತಃ ಸಿಎಂ ನಡೆಸಿದ್ದಾರೆ. ಈ ಗ್ಯಾರಂಟಿಗಳ ಹಣೆಬರಹ ಏನಾಗಿದೆ ಎನ್ನುವುದು ಇದರಿಂದ ತಿಳಿಯುತ್ತದೆ ಎಂದು ಹೇಳಿದರು.

ಶಕ್ತಿ ಯೋಜನೆಗೆ ಹಣ ಒದಗಿಸಬೇಕಾದ ಜವಾಬ್ದಾರಿ ಸರಕಾರದ ಮೇಲಿದೆ. ಈಗಾಗಲೇ ಆ ದುಡ್ಡು ಸ್ವಾಹಾ ಆಗುತ್ತಿದೆ. ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಹೆಣ್ಣುಮಕ್ಕಳ ಹೆಸರಲ್ಲಿ ಬೇಕಾಬಿಟ್ಟಿ ಟಿಕೆಟ್ ಹರಿಯಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು 25 ಜನ ಇದ್ದಾರೆ, ಕೇಂದ್ರದಿಂದ ಅನುದಾನ ತರಲಿ ಎನ್ನುವ ಕಾಂಗ್ರೆಸ್, ಮೊದಲು ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲಿ. ಬರ ವೀಕ್ಷಣೆಗೆ ಅಂತ ಟಾಸ್ಕ್ ಫೋರ್ಸ್ ಸಿದ್ದ ಮಾಡಿದ್ದಾರೆ. ಇದು ಬರ ವೀಕ್ಷಣೆಗೆ ಅಂತ ಸಿದ್ದಗೊಳಿಸಿರುವ ತಂಡವಲ್ಲ, ಯಾವ ಜಿಲ್ಲೆಯಲ್ಲಿ ಯಾರು ಸಮರ್ಥ ನಾಯಕರಿದ್ದರೆ, ಅವರನ್ನು ಹುಡುಕಿ ಅವರನ್ನು ಹೇಗೆ ಬಲೆ ಕೆಡವಬೇಕು ಎಂದು ಹೇಳಿ ಕಳಿಸಿಕೊಟ್ಟ ತಂಡಗಳಿವು ಎಂದು ಟೀಕಿಸಿದರು.

ನಿಮ್ಮ ಕೆಲಸ ಮಾಡಿ:

ಕದ್ದ ಮಾಲು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು ಶೋಕಿ ಮಾಡಿದವರು ನನ್ನ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿಯಾಗಿ ನಿಮ್ಮ‌ ಕೆಲಸ ಮಾಡಿ; ಆಮೇಲೆ ಪ್ರತಿಪಕ್ಷಗಳ ಬಗ್ಗೆ ಮಾತನಾಡಲಿ. ಕುಮಾರಸ್ವಾಮಿ ಏನು ಮಾಡಿಲ್ಲ ಎಂದು ಕೆಲವರು ಮಾತನಾಡುತ್ತಾರೆ. ಆದರೆ, ನಾನು ರಾಜ್ಯದ ರೈತರ ಸಾಲಮನ್ನಾ ಮಾಡಿದ್ದೇನೆ. ಮಂಡ್ಯದಲ್ಲಿ 750 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಈಗ ನಿಮ್ಮ ಸರ್ಕಾಕಾರದ ಅವಧಿಯಲ್ಲೂ ನಿಮ್ಮ ನಾಯಕರಿಂದ ಸಾಲ ಮನ್ನಾ ಮಾಡಿಸಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಬಿಟ್ಟಾಯ್ತು, ರೈತರ ಉಳಿವಿಗೆ ಇದನ್ನಾದ್ರೂ ಮಾಡಿ ಎಂದು ಆಗ್ರಹಿಸಿದರು.

ಒಳಮೀಸಲಾತಿ ವಿಚಾರವಾಗಿ ಸಚಿವ ಕೆ.ಎಚ್‌. ಮುನಿಯಪ್ಪನವರು ಶಾಸಕರ ಮನೆ ಮುಂದೆ ಧರಣಿ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ದಲಿತ ಸಮುದಾಯದವರು ಮೊದಲು ಕಾಂಗ್ರೆಸ್ ಶಾಸಕರ ಮನೆ ಮುಂದೆ ಧರಣಿ ಮಾಡಬೇಕಿದೆ. ದಲಿತರ ಹೆಸರು ಹೇಳಿಕೊಂಡು ಬಂದವರು ಮೀಸಲಾತಿ ಕೊಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ನೀವು‌. ಸಿಎಂ ಜತೆ ಚರ್ಚೆ ಮಾಡಬೇಕಾಗಿತ್ತು. ಜಾತಿ ಹೆಸರಲ್ಲಿ ಲೋಕಸಭಾ ಚುನಾವಣೆಗೆ ಟ್ರಂಪ್ ಕಾರ್ಡ್ ನಡೆಸುತ್ತಿದ್ದು, ದಲಿತ ಸಮುದಾಯದವರು ಮೊದಲು ನೀವು ಅಧಿಕಾರ ಕೊಟ್ಟಿರುವ ನಾಯಕರ ಮನೆಗೆ ನುಗ್ಗಿ ನಿಮ್ಮ ಆಗ್ರಹ ಮಂಡಿಸಿ ಎಂದು ಕರೆ ನೀಡಿದರು‌.

ಲೋಕಸಭೆ ಚುನಾವಣೆ ಬಳಿಕ

ಇಂಡಿಯಾ ಮೈತ್ರಿಕೂಟದಿಂದ ಒಬ್ಬೊಬ್ಬರಾಗಿ ಕಿತ್ತುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಕುತಂತ್ರಿಗಳು ಎಂದು ಹೇಳಿ ಅಖಿಲೇಶ್ ಯಾದವ್ ಹೊರಗೆ ಕಾಲಿಟ್ಟಿದ್ದಾರೆ. ಮೊದಲು ಅದನ್ನು ಸರಿಪಡಿಸಿಕೊಳ್ಳಿ. ಆಮೇಲೆ ನಮ್ಮನ್ನು ಕರೆದೊಯ್ಯುವಿರಂತೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೋ ನೋಡೋಣ. ರಾಜ್ಯ ಸರ್ಕಾರದ ಭವಿಷ್ಯವನ್ನು ಕಾಣದ ಶಕ್ತಿ ತೀರ್ಮಾನ ಮಾಡಲಿದೆ. ಕಾಂಗ್ರೆಸ್‌ಗೆ 1994ರ ಪರಿಸ್ಥಿತಿ ಮರುಕಳಿಸುವುದು ದೂರವಿಲ್ಲ ಎಂದು ಹೇಳಿದರು.

ಇದೆಲ್ಲ ಬಹಳ ದಿನಗಳ ಕಾಲ ನಡೆಯುವುದಿಲ್ಲ. ಈ ಹಿಂದೆ ಏನೆಲ್ಲ ಆಗಿದೆ ಎಂದು ನೋಡಿದ್ದೇವೆ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾದಾಗ ಬಿಜೆಪಿಯಿಂದ ಅಂದು ಯಾರನ್ನೆಲ್ಲ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡಿದರು, 2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಯಾರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡರು? ಕೊನೆಗೆ 78 ಸ್ಥಾನಗಳಿಗೆ ಬಂದು ನಿಂತರು. 1989ರಲ್ಲಿ 180 ಸ್ಥಾನ ಪಡೆದು ಆಳ್ವಿಕೆ ಮಾಡಿದ್ದ ನೀವು, 1994ರಲ್ಲಿ 38 ಸಂಖ್ಯೆಗಳಿಗೆ ಕುಸಿದಿದ್ದಿರಿ. ಆ ದಿನ ದೂರವಿಲ್ಲ ಎಂದು ಟಾಂಗ್ ಕೊಟ್ಟರು.

ಈ ಸಂದರ್ಭದಲ್ಲಿಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಸಚಿವ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ