Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ತಿಹಾರ್‌ಗೆ ಓಡುವುದು ಖಚಿತ: ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ

ರಾಮನಗರ, ಅ.8: ಅವರು (ಡಿಕೆ ಶಿವಕುಮಾರ್) ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಮತ್ತೆ ಅಲ್ಲಿಗೆ ಪರ್ಮನೆಂಟಾಗಿ ಹೋದರೂ ಅಚ್ಚರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಅವರ ಜತೆ ಎಂದೂ ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸ್ತಾ ಇದ್ದೇನೆ. ಅವರು ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ.

ಅವರು ಮತ್ತೆ ಅಲಿಗೆ ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಮಾರ್ಮಿಕವಾಗಿ ನುಡಿದರು.

ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ ಅಭ್ಯರ್ಥಿ ಆಗುವುದೇ ಅನುಮಾನ, ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ ಎಂದು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.

ನಯವಂಚಕ ಮಾತುಗಳು:

ಸಾರ್ವಜನಿಕವಾಗಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹರಿಹಾಯ್ದರು.

2018 ಸರ್ಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಭೆಯಲ್ಲಿ ಕನಕಪುರ ಕ್ಷೇತ್ರದ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಅವರನ್ನು ನಂಬಿ ನಾನು ಕುತ್ತಿಗೆ ಕುಯ್ದುಕೊಂಡಿದ್ದೇನೆ, ನಿಮ್ಮ ಕುತ್ತಿಗೆಯನ್ನು ಕುಯ್ದಿದ್ದೇನೆ. ಅವರಿಂದ ನನಗೆ, ನಿಮಗೆ ಅನ್ಯಾಯ ಆಗಿದೆ. ಅದನ್ನು ಬಿಟ್ಟರೆ ಕನಕಪುರ ಜನರಿಗೆ ನನ್ನಿಂದ ಎಳ್ಳಷ್ಟೂ ಅನ್ಯಾಯ ಆಗಿಲ್ಲ. ಆಗಿರುವ ಅನ್ಯಾಯ ಸರಿ ಮಾಡುವ ಹೊಣೆ ನನ್ನದು ಎಂದು ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಟೆ ಕಟ್ಟಿ ಮೆರೆದೋರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕು. ಅದಕ್ಕೆ ನೀವೆಲ್ಲರೂ ಶ್ರಮ ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೈತ್ರಿಕೂಟದ ಮೂಲಕ ಇಡೀ ರಾಜ್ಯಕ್ಕೆ ದೇಶಕ್ಕೆ ನಾವು ಒಳ್ಳೆಯ ಸಂದೇಶ ಕೊಡಬೇಕು ಎಂದರು.

ನಾವೆಲ್ಲರೂ ನಂಬಿಕೆ, ವಿಶ್ವಾಸ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ. ಯಾರೇ ಮೈತ್ರಿಕೂಟದ ಅಭ್ಯರ್ಥಿ ಆದರೂ ನಾವು ಒಟ್ಟಾಗಿ ಕೆಲಸ ಮಾಡೋಣ ಎಂದ ಅವರು; ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದು ಕುಮಾರಸ್ವಾಮಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ