Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ.ಶಿವಕುಮಾರ್ ರಾಜಕೀಯ ಎಳಸುತನ- ಅಶ್ವಥ್ ನಾರಾಯಣ ಗೌಡ

ಬೆಂಗಳೂರು: ಗುಜರಾತ್ ಹೈಕೋರ್ಟ್ ತೀರ್ಪನ್ನು ಗಮನಿಸದೇ ಹಾಗೂ ಪೂರ್ಣವಾಗಿ ತಿಳಿದುಕೊಳ್ಳದೆ ಡಿಕೆ ಶಿವಕುಮಾರ್‍ರವರು ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ಕೊಟ್ಟಿರುವುದನ್ನು ನೋಡಿದರೆ ರಾಹುಲ್ ಗಾಂಧಿ ಅವರಿಗೆ ಇರುವ ರಾಜಕೀಯ ಎಳಸುತನ ಇವರಿಗೂ ಇದೆ ಎಂಬುದು ಸಾಬೀತಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಗೌಡ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟೀಕೆ ಮಾಡುವ ಭರದಲ್ಲಿ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ದೇಶದಲ್ಲಿರುವ ಮೋದಿ ಹೆಸರಿನವರು ಎಲ್ಲರೂ ಒಂದೇ ಎನ್ನುವ ರೀತಿ ಟೀಕೆ ಮಾಡಿದ್ದರು. ಇದರ ವಿರುದ್ಧವಾಗಿ ಗುಜರಾತಿನ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ರಾಹುಲ್ ಗಾಂಧಿಯವರನೇ ನೇರವಾಗಿ ಕೋರ್ಟಿಗೆ ಬರುವಂತೆ ಮಾಡಲಾಗಿತ್ತು ರಾಹುಲ್ ಗಾಂಧಿಯವರು ತಾವು ಮಾಡಿದ ಆಪಾದನೆಗೆ ಸರಿಯಾಗಿ ಸಮಜಾಯಿಷಿ, ಉತ್ತರ ನೀಡಲು ಸಾಧ್ಯವಾಗದೆ ಸೂರತ್ ನ್ಯಾಯಾಲಯವು ಸಂಸದ ಸ್ಥಾನವನ್ನು ವಜಾಗೊಳಿಸಿ ಎರಡು ವರ್ಷ ಕಠಿಣ ಶಿಕ್ಷೆಯನ್ನು ನೀಡಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

ಇದರ ವಿರುದ್ಧವಾಗಿ ರಾಹುಲ್ ಗಾಂಧಿಯವರು ಗುಜರಾತ್ ಹೈಕೋರ್ಟಿನ ಮೊರೆ ಹೋಗಿದ್ದರು. ಗುಜರಾತ್ ಹೈಕೋರ್ಟ್ ಇಂದು ರಾಹುಲ್ ಗಾಂಧಿಯವರ ಪರ ವಾದÀವನ್ನು ಆಲಿಸಿ ಗುಜರಾತಿನ ಕೆಳ ನ್ಯಾಯಾಲಯ ಕೊಟ್ಟ ತೀರ್ಪನ್ನು ಎತ್ತಿ ಹಿಡಿದಿದೆ. ಅಲ್ಲದೆ, ಶಿಕ್ಷೆ ಕಡಿಮೆ ಮಾಡುವಂv ಇವರ ಮನವಿಯನ್ನು ತಿರಸ್ಕರಿಸಿದೆ. ಗುಜರಾತಿನ ಹೈಕೋರ್ಟ್ ತೀರ್ಪಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂಬುದೂ ಗಮನಾರ್ಹ ಎಂದು ತಿಳಿಸಿದ್ದಾರೆ.

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುಜರಾತ್ ಹೈಕೋರ್ಟಿನ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸಿನ ಸೋನಿಯಾ ಕುಟುಂಬದ ಜೊತೆ ಆಪ್ತನೆಂದು ತೋರಿಸಿಕೊಳ್ಳಲು ಕಾಂಗ್ರೆಸ್ಸಿನ ಎಲ್ಲಾ ಶಾಸಕರನ್ನು ಕರೆದು ಈ ದಿವಸ ವಿಕಾಸ ಸೌಧ ಮತ್ತು ವಿಧಾನಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಬಳಿ ಮಧ್ಯಾಹ್ನ 3:30ಕ್ಕೆ ಬಿಜೆಪಿ ವಿರುದ್ಧವಾಗಿ ಹೋರಾಟ ಮಾಡಲು ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಇದು ಅವರ ಎಳಸುತನದ ರಾಜಕೀಯವನ್ನು ಎತ್ತಿ ತೋರಿಸುವಂತಿದೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರು ರಾಜಕೀಯದಲ್ಲಿ ಹಲವು ಬಾರಿ ತಮ್ಮ ಎಡಬಿಡಂಗಿತನ ಮತ್ತು ಎಳಸುತನವನ್ನು ಪ್ರದರ್ಶನ ಮಾಡಿದ್ದಾರೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರಿಗೆ ಇ.ಡಿ, ಆದಾಯ ತೆರಿಗೆ ಇಲಾಖೆಯಂಥ ತನಿಖಾ ಸಂಸ್ಥೆಗಳು ನೋಟಿಸ್ ಕೊಟ್ಟಾಗ, ವಿಚಾರಣೆಗೆ ಕರೆದಾಗ ಅವುಗಳನ್ನು ಎದುರಿಸಲಾಗದೆ ತಮ್ಮಲ್ಲಿರೋ ತಪ್ಪನ್ನು ಮುಚ್ಚಿಕೊಳ್ಳಲು ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಮಜಾಯಿಷಿ ನೀಡಿದ್ದರು.

ಬಿಜೆಪಿಯವರು ದುರುದ್ದೇಶದಿಂದ ನನ್ನ ಮೇಲೆ ಮೊಕದ್ದಮೆ ಹೂಡಿದ್ದಾರೆ. ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬ ಬಾಲಿಶ ರಾಜಕೀಯ ಟೀಕೆಗಳನ್ನು ಮಾಡುತ್ತಿದ್ದರು ಎಂದಿರುವ ಅವರು, ರಾಹುಲ್ ಗಾಂಧಿ ನಡೆದುಕೊಳ್ಳುತ್ತಿರುವ ರೀತಿ ನೀತಿಯನ್ನು ದೇಶದ ಜನ ತಿಳಿದುಕೊಂಡಿದ್ದಾರೆ. ಕಾಂಗ್ರೆಸ್‍ನವರು ಯಾವುದೇ ತನಿಖಾ ಸಂಸ್ಥೆಗಳನ್ನು ನಂಬುವುದಿಲ್ಲ; ಡಾಕ್ಟರ್ ಬಾಬಾಸಾಹೇಬ ಬಿ.ಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಬಗ್ಗೆಯೂ ಅವರಿಗೆ ಗೌರವವಿಲ್ಲ. ನ್ಯಾಯಾಲಯದ ತೀರ್ಪುಗಳನ್ನು ಗೌರವಿಸುವುದೇ ಇಲ್ಲ ಎಂದು ಆಕ್ಷೇಪಿಸಿದ್ದಾರೆ.

ಮತದಾರರು ಇವೆಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ಮತದಾರರು ನಿಮಗೆ ಸರಿಯಾದ ತೀರ್ಪನ್ನು ಕೊಡಲಿದ್ದಾರೆ ಎಂದು ಬಿಜೆಪಿ ಎಚ್ಚರಿಸುವುದಾಗಿ ಅವರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ