Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಬ್ರ್ಯಾಂಡ್ ಬೆಂಗಳೂರು': ಮಕ್ಕಳ ಸಲಹೆಯನ್ನೂ ಕೇಳುತ್ತೇನೆ- ಡಿ.ಕೆ. ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.25: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆಯಿಂದ ರೂಪಿಸಿರುವ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವರ್ಬ್ ಬ್ಯಾಟಲ್ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ ಅವರು, ಇಂದು ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ ಪರಿಸರದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆಗ ನಾನು, ಪಾಲಿಕೆಯು ಶಾಲಾ ಆಡಳಿತ ಜೊತೆ ಒಡಂಬಡಿಕೆ ಮಾಡಿಕೊಂಡು ನಗರದಲ್ಲಿ ಶಾಲಾ ಮಕ್ಕಳಿಂದ ಗಿಡ ನೆಡಿಸಿ ಅವುಗಳನ್ನು ಬೆಳೆಸುವ ಜವಾಬ್ದಾರಿ ಅವರಿಗೆ ನೀಡಬೇಕು. ಆ ಗಿಡ ಬೆಳೆಸುವ ಮಗುವಿಗೆ ಆ ಮರದ ಬಳಿ ಹೆಸರು ಹಾಕಿಕೊಳ್ಳುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳೇ ಸೂಚನೆ ನೀಡಿದೆ. ಇಲ್ಲಿನ ಸಂಸ್ಕೃತಿ ಹಾಗೂ ವಾತಾವರಣ ನಮಗೆ ಹೊಂದಿಕೊಳ್ಳುವಂತಿದ್ದು, ನಾವು ಹಸಿರು ಬೆಂಗಳೂರನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚಿನ ಸಲಹೆಗಳು ಬಂದಿವೆ. ಇವುಗಳ ಜತೆ ಯುವ ಪ್ರತಿಭೆಗಳ ಆಲೋಚನೆಗಳನ್ನು ಪಡೆಯಬೇಕಿದೆ. ಅವರು ಯಾವುದೇ ವೈಯಕ್ತಿಕ ಆಸಕ್ತಿ ಇಲ್ಲದೆ ಸಲಹೆ ನೀಡುತ್ತಾರೆ.

ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಿಕರನ್ನು ಸೃಷ್ಟಿಸುವವನಲ್ಲ ಎಂಬ ಮಾತಿದೆ. ನಿವುಗಳು ಕೂಡ ನೀವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಲ್ಲಿ ನಾಯಕರಾಗಿ ಬೆಳೆಯಬೇಕು ಎಂದು ಬಯಸುತ್ತೇನೆ. ನೀವು ಸಧೃಡವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜಕ್ಕೆ ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ ಎಂದರು.

ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಇದಕ್ಕೆ ಹೊಸ ರೂಪ ನೀಡುವುದು ಸವಾಲಿನ ಕೆಲಸ. ಇದಕ್ಕಾಗಿ ನಾವು ನಿನ್ನೆ ಬೆಂಗಳೂರು ವಿನ್ಯಾಸಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಇಲ್ಲಿನ ವಾತಾವರಣ ಹಾಗೂ ಸಂಸ್ಕೃತಿಗೆ ಮನಸೋತು ಹೆಚ್ಚಿನ ಸಮಯದಲ್ಲಿ ಬೆಂಗಳೂರಿಗೆ ಬಂದು ಮರಳಿ ತಮ್ಮ ಊರಿಗೆ ಹೋಗುವುದಿಲ್ಲ. ಬೆಂಗಳೂರು ಜ್ಞಾನ, ಶಿಕ್ಷಣ, ಮೆಡಿಕಲ್, ಐಟಿ ರಾಜಧಾನಿ ಆಗಿದೆ. ಇಲ್ಲಿ ಓದಿ ಬೆಳೆದವರು ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಇಲ್ಲಿ ಓದಿದ ಪ್ರತಿಭಾವಂತರು ಹೊರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಕೆಲವರು ಮಾತ್ರ ಇಲ್ಲೇ ಉಳಿಯುತ್ತಿದ್ದಾರೆ. ಕೆಲವೊಮ್ಮೆ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳಿಗಿಂತ ಮಕ್ಕಳು ಅತ್ಯುತ್ತಮ ಸಲಹೆಗಳನ್ನು ನೀಡುತ್ತಾರೆ. ಹೀಗಾಗಿ ನಾನು ನಿಮ್ಮ ಸಲಹೆ ಪಡೆಯುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ