Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.1: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್ ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ಅದನ್ನು ಖರ್ಚು ಮಾಡಿಲ್ಲ.ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣತಮ್ಮಂದಿರೆ. ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ ಎಂದರು.

ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ.

ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.

ಈ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ, ಹೀಗಾಗಿ ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ