Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿ.ಕೆ. ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.16: “ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, 'ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ’ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

“ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ಅವರಂತೆ ನಾನು ಮಾತನಾಡುವುದಿಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಅವರಂತೆ ಮಾತನಾಡಲು ಸಾಧ್ಯವಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ” ಎಂದು ತಿಳಿಸಿದರು.

ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದರು.

"ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ" ಎಂದೂ ಹೇಳಿದರು.

ವೇಣುಗೋಪಾಲ್ ಅವರ ಆಗಮನ ಹಾಗೂ ಪಕ್ಷದ ನಾಯಕರ ಸಭೆ ಕುರಿತು ಕೇಳಿದಾಗ, “ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾನು ಪಕ್ಷದ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲೋಕಸಭೆ ಕ್ಷೇತ್ರಗಳಿಗೆ ಹೋಗಿ ವರದಿ ನೀಡುವಂತೆ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆವು. ಈ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಅದನ್ನು ತ್ವರಿತವಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ನಿಗಮ-ಮಂಡಳಿಗಳಲ್ಲಿ ಶಾಸಕರಿಗೆ ಮಾತ್ರ ಸ್ಥಾನವೇ? ಎಂಬ ಪ್ರಶ್ನೆಗೆ 'ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ನೀಡಬೇಕು. ಪಕ್ಷ ಎಂದರೆ ಎಲ್ಲರೂ ಸೇರುತ್ತಾರೆ. ಎಲ್ಲರಿಗೂ ಸ್ಥಾನಮಾನ ನೀಡಬೇಕು. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ಒಂದೆರಡು ದಿನದಲ್ಲಿ ಚರ್ಚೆ ಮಾಡುತ್ತೇವೆ' ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ