Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಮೇ.10:ಕೆಂಕೇರಮ್ಮ ದೇವಿ ನಮ್ಮ ಮನೆ ದೇವರು. ನಾಮಪತ್ರ ಸಲ್ಲಿಕೆ ಮುನ್ನ ನಾವು ಇಲ್ಲಿ ಪೂಜೆ ಸಲ್ಲಿಸಿದ್ದೆವು. ಈಗ ಮತದಾನ ಮುನ್ನ ಪೂಜೆ ಸಲ್ಲಿಸುತ್ತಿದ್ದೇವೆ. ಇಲ್ಲಿಂದ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ನಂತರ ಮತದಾನ ಮಾಡುತ್ತಿದ್ದೇವೆ.

ಎಲ್ಲಾ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ. ಇಂದು ರಾಜ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ದಿನ. ನಮ್ಮ ಭವಿಷ್ಯ ನಾವೇ ಬರೆದುಕೊಳ್ಳುವ ದಿನ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ.

ನನ್ನ ಪುತ್ರ ಹಾಗೂ ಪುತ್ರಿ ಇಬ್ಬರೂ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಹೊಸ ಮತದಾರರಿಗೆ ಮತದಾನದ ಉಮ್ಮಸ್ಸು ಇರುತ್ತದೆ. ರಾಜ್ಯದ ಎಲ್ಲಾ ಯುವ ಮತದಾರರಿಗೆ ಶುಭ ಕೋರಿ, ರಾಜ್ಯಕ್ಕೆ ದೊಡ್ಡ ಬದಲಾವಣೆ ತರುವ ಜವಾಬ್ದಾರಿ ಇದ್ದು ಅದನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡುತ್ತೇನೆ. ಯುವ ಮತದಾರರು ಪ್ರಜ್ಞಾವಂತರಾಗಿದ್ದು, ಈ ದುರಾಡಳಿತವನ್ನು ಕೊನೆಗಾಣಿಸುತ್ತಾರೆ ಎಂದು ಭಾವಿಸಿದ್ದೇನೆ. ಈ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ ಅವರು. ಈ ಯುವ ಮತದಾರರು ಪ್ರಜಾಪ್ರಭುತ್ವದ ಆಚರಣೆ ಮಾಡಲಿ.

ಸಚಿವ ಅಶೋಕ್ ನಿಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದು, ಎಷ್ಟು ಅಂತರದಿಂದ ಗೆಲುವು ಸಾಧಿಸುತ್ತೀರಿ ಎಂದು ಕೇಳಿದಾಗ, 'ಅಶೋಕ್ ಅವರು, ಮುಖ್ಯಮಂತ್ರಿಗಳು ಇಲ್ಲಿ ಬಂದು ಪ್ರಚಾರ ಮಾಡಿದ್ದಾರೆ. ಇದು ಗುಪ್ತ ಮತದಾನ, ಯಾರು ಗೆಲ್ಲುತ್ತಾರೆ ಎಂದು 13ರಂದು ನೋಡೋಣ' ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ