Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶ್ವರಪ್ಪ ಹೈಕಮಾಂಡ್‌ಗೆ ಲವ್‌ಲೆಟರ್ ಬರೆದಿದ್ದಾರೆ: ಡಿಕೆಶಿ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.11: ಬಿಜೆಪಿ ಪಕ್ಷ ಇದುವರೆಗೂ ಒಬ್ಬ ಅಭ್ಯರ್ಥಿಯ ಹೆಸರು ಬಿಡುಗಡೆ ಮಾಡಿಲ್ಲ. ಇದರ ಮಧ್ಯೆಯೇ ಈಶ್ವರಪ್ಪ ಅವರು ತಮ್ಮ ಹೈಕಮಾಂಡ್ ನಾಯಕರಿಗೆ ಲವ್ ಲೆಟರ್ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಈಶ್ವರಪ್ಪ ಅವರು ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಅವರ ಪಕ್ಷ ಹಾಗೂ ಅವರ ತೀರ್ಮಾನ, ಅವರಿಗೆ ಒಳ್ಳೆಯದಾಗಲಿ ಎಂದು ನವದೆಹಲಿಯಿಂದ ಮರಳಿದ ಬಳಿಕ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಡಿದರು.

ಕಾಂಗ್ರೆಸ್ ಈಗಾಗಲೇ 167 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದೆ. ಉಳಿದ ಕ್ಷೇತ್ರಗಳ ಪಟ್ಟಿ ಕೂಡ ಸದ್ಯದಲ್ಲೇ ಬಿಡುಗಡೆ ಆಗಲಿದೆ . ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಕೇಳಿದಾಗ, 'ಲಕ್ಷ್ಮಣ ಸವದಿ ಹಿರಿಯ ನಾಯಕರು. ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಸ್ತಾಪವಾಗಿಲ್ಲ. ಸೋಮಣ್ಣ ಅವರು ಕೂಡ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಸುದ್ದಿಯಾಯಿತು. ಆದರೆ ಅವರು ಯಾವತ್ತೂ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಮಾಡಿಲ್ಲ. ಶಿವಮೊಗ್ಗ, ಹಾವೇರಿ ಇತರೆ ಭಾಗಗಳ ಕೆಲ ನಾಯಕರು ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಅವರು ಬಂದಾಗ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಖಾಲಿ ಇಲ್ಲದಿದ್ದರೆ ಅವರನ್ನು  ಪಕ್ಷಕ್ಕೆ ಕರೆದುಕೊಳ್ಳುವುದು ಸೂಕ್ತವಲ್ಲ' ಎಂದು ತಿಳಿಸಿದರು.

ಜೆಡಿಎಸ್ ಹಾಸನ ಟಿಕಟ್ ಹಂಚಿಕೆ ಬಗ್ಗೆ ಮಾತನಾಡಿದ ಡಿಕೆಶಿ, 'ಅವರ ಪಕ್ಷ, ಕುಟುಂಬದ ವಿಚಾರದ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರ ರಾಜಕೀಯ ಅವರು ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅವರ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಅವರ ಜತೆ ನಾವು ಕೆಲಸ ಮಾಡಿ ಈಗ ಅವರು ಸರಿ ಇಲ್ಲ ಎಂದು ದೂರುವುದು ಸರಿಯಲ್ಲ' ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ