Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲಾಸ್ಟಿಕ್ ಮುಕ್ತ ದೇವನಹಳ್ಳಿಗೆ ಸಹಕಾರ ನೀಡಿ : ದೊಡ್ಡಮಲವಯ್ಯ

 

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 18 : ಪ್ಲಾಸ್ಟಿಕ್ ಮುಕ್ತ ದೇವನಹಳ್ಳಿ ಪಟ್ಟಣವನ್ನಾಗಿಸಲು ಪ್ರತಿ ನಾಗರೀಕರು ಸಹಕಾರ ನೀಡಬೇಕು. ಒಂದು ವೇಳೆ ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ಪುರಸಭೆಯಿಂದ ದಂಡ ವಿಧಿಸಲಾಗುತ್ತದೆ ಎಂದು ಪುರಸಭಾ ಮುಖ್ಯಾಧಿಕಾರಿ ದೊಡ್ಡಮಲವಯ್ಯ ತಿಳಿಸಿದರು.

 

ದೇವನಹಳ್ಳಿ ಪಟ್ಟಣದ ಬಜಾರ್‌ರಸ್ತೆಯಲ್ಲಿರುವ ಮಳಿಗೆಯೊಂದರಲ್ಲಿ ಪ್ಲಾಸ್ಟಿಕ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸುವುದರ ಮೂಲಕ ಅವರು ಮಾತನಾಡಿದರು.

ಸ್ವಚ್ಛ ಸುಂದರ ಮತ್ತು ಆರೋಗ್ಯಕರ ವಾತಾವರಣ ಸೃಷ್ಠಿಯಾಗಬೇಕಾದರೆ, ಗೃಹ ಬಳಕೆಗೆ ಪರಿಸರ ಸ್ನೇಹಿ ವಸ್ತುಗಳ ಬಳಕೆ ಹೆಚ್ಚು ಮಾಡಬೇಕು. ಪ್ಲಾಸ್ಟಿಕ್‌ ನಂತರ ಕರಗದ ವಸ್ತುವನ್ನು ಬಳಸುವುದು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುವುದರ ಜತೆಗೆ ಪಕೃತಿ ನಾಶಕ್ಕೆ ಕಾರಣವಾಗುತ್ತದೆ. ಪುರಸಭೆಯಿಂದ ದಿಟ್ಟ ಹೆಜ್ಜೆಯನ್ನಿಡಲಾಗುತ್ತಿದ್ದು, ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಪ್ರತಿಯೊಬ್ಬರೂ ಮುಂದಾಗಬೇಕು. ಈಗಾಗಲೇ ಸಾಕಷ್ಟು ಬಾರಿ ಬಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಆದರೂ ಸಹ ಕೆಲವು ಅಂಗಡಿಯವರು ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವಾಗುತ್ತಿರುವುದು ಪದೇ ಪದೇ ಕಂಡುಬಂದಿದೆ. ಇನ್ನಾದರೂ ಉದ್ಯಮಿದಾರರು ಇಂತಹ ಪ್ಲಾಸ್ಟಿಕ್‌ಯುಕ್ತ ವಸ್ತುಗಳನ್ನು ಮಾರಾಟವನ್ನು ನಿಲ್ಲಿಸಬೇಕು. ಗ್ರಾಹಕರು ಪ್ಲಾಸ್ಟಿಕ್ ಖರೀದಿಸುವುದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪುರಸಭಾ ಆರೋಗ್ಯಾಧಿಕಾರಿ ಶ್ರೀದೇವಿ, ಪುರಸಭಾ ಸಿಬ್ಬಂದಿ, ಮತ್ತಿತರರು ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ