Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರು ಬಸ್‌ ಟಿಕೆಟ್ ಪಡೆಯಬೇಡಿ:ಎಚ್.ಡಿ. ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 26: ರಾಜ್ಯದ ಜನ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ ಮತ್ತು ಮಹಿಳೆಯರು ಯಾವುದೇ ಸರ್ಕಾರಿ ಬಸ್‌ನಲ್ಲಿ ಟಿಕೆಟ್ ತೆಗೆಸಿಕೊಳ್ಳದೆ ಉಚಿತ ಪ್ರಯಾಣ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇಂದು ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಯಾವುದೇ ಷರತ್ತುಗಳನ್ನು ತಿಳಿಸದೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ಭಾಷಣಗಳನ್ನು ಮಾಡಿದ್ದಾರೆ. ಅದರಂತೆ ಜನರು ಈಗಿನಿಂದಲೇ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಪಾವತಿಸಬಾರದು. ಮಹಿಳೆಯರೂ ಸಹ ಲಕ್ಸುರಿ ಬಸ್‌ ಸಹಿತ ಯಾವುದೇ ಬಸ್ ಹತ್ತಿದರೂ ಟಿಕೆಟ್ ಪಡೆಯದೆ ಉಚಿತ ಪ್ರಯಾಣ ಮಾಡಬೇಕು ಎಂದು ಕರೆ ನೀಡಿದರು.

ಐದು ಉಚಿತ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಈಗ ಹಲವು ಷರತ್ತುಗಳನ್ನು ಹಾಕಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಒದ್ದಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲವೂ ಉಚಿತ-ಖಚಿತ ಎಂದು ಭರವಸೆ ನೀಡಿ ಈಗ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ಮೋಸದಾಟಕ್ಕೆ ಜೆಡಿಎಸ್ 42 ಕ್ಷೇತ್ರಗಳಲ್ಲಿ ಸೋತಿದೆ. ರಾಮನಗರ, ಕುಣಿಗಲ್, ಮಾಗಡಿ ರಾಜರಾಜೇಶ್ವರಿನಗರ ಸೇರಿದಂತೆ ಹಲವೆಡೆ ಕೂಪನ್‌ಗಳನ್ನು ನೀಡಿ ಮತದಾರರನ್ನು ಯಾಮಾರಿಸಿ ಜಯಗಳಿಸಿದ್ದಾರೆ. ಚುನಾವಣೆ ಹಿಂದಿನ ರಾತ್ರಿ ಈ ಕೂಪನ್‌ಗಳನ್ನು ನೀಡಿದ್ದು, ಒಂದು ಕೂಪನ್‌ಗೆ 3,500ರಿಂದ 5000 ರೂ.ವರೆಗೆ ವಿವಿಧ ವಸ್ತುಗಳನ್ನು ಖರೀದಿಸಬಹುದು ಎಂದು ಹೇಳಿದ್ದಾರೆ. ಈ ಬಗ್ಗೆ ಚುನಾವಣೆ ಆಯೋಗಕ್ಕೆ ದೂರು ನೀಡಬೇಕೊ ಅಥವಾ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬೇಕೋ ಎಂಬುದರ ಕುರಿತು ಮುಂದೆ ನಿರ್ಧಾರ ಮಾಡಲಿದೆ.

ಜೆಡಿಎಸ್ ವಿಸರ್ಜನೆ ಮಾಡುವ ಕುರಿತು ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಎಚ್‌ಡಿಕೆ, 1989ರಲ್ಲಿ ಪ್ರಚಂಡ ಜಯಗಳಿಸದ್ದ ಕಾಂಗ್ರೆಸ್ 1994ರಲ್ಲಿ ಯಾಕೆ 44 ಸ್ಥಾನಕ್ಕೆ ಬಂತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಈ ಸೋಲಿನಿಂದ ನಾವು ದೃತಿಗೆಟ್ಟಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ದೇಶದಲ್ಲಿ ಇರಬೇಕೋ, ಇಲ್ಲವೋ ಎಂಬುದನ್ನು ನಿರ್ಧಾರವಾಗಲಿದೆ. ಆ ಬಗ್ಗೆ ಎಚ್ಚರ ವಹಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಬಿಬಿಎಂಪಿ ಚುನಾವಣೆಗೆ ಪಕ್ಷ ಸಜ್ಜಾಗಲು ಗುರುವಾರ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆದಿದೆ. ಬರುವ ದಿನಗಳಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಚುನಾಯಿತ ಶಾಸಕರು, ಪರಾಜಿತ ಅಭ್ಯರ್ಥಿಗಳು, ಮುಖಂಡರ ಸಭೆ ಕರೆದು ಚುನಾವಣೆಗೆ ಸಜ್ಜುಗೊಳಿಸುತ್ತೇವೆ. ಜೊತೆಗೆ ಬಿಬಿಎಂಪಿಯಲ್ಲೂ ಸಹ ಸ್ಪರ್ಧಿಸಲು ವಾರ್ಡ್‌ವಾರು ಅಭ್ಯರ್ಥಿಗಳ ಆಯ್ಕೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಇಬ್ರಾಹಿಂ ಮುಂದುವರಿಕೆ:
ಪಕ್ಷದ ಸೋಲಿನಿಂದಾಗಿ ಸಿ.ಎಂ. ಇಬ್ರಾಹಿಂ ನೈತಿಕವಾಗಿ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ, ಪಕ್ಷ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ಧೃಡಪಡಿಸಿದರು. ಅದೇ ರೀತಿ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸಹ ಮುಂದುವರಿಸುತ್ತೇವೆ ಎಂದು ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಪ್ರಕಟಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕರ್ನಾಟಕ, ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ಪ್ರತಿನಿಧಿಗಳು, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಜೆಡಿಎಸ್ ನಗರ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಬಾಗಲಕೋಟೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಮಾವಿನಮರದ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ