Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಸಿ ಬ್ಯಾಂಕ್ ಬಗ್ಗೆ ಅಪಪ್ರಚಾರ ಬೇಡ: ಎ.ನಾಗರಾಜ್






ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಸೆ.12:ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಮೂಲಕ ಅವಳಿ ಜಿಲ್ಲೆಯಲ್ಲಿ ರೈತರಿಗೆ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸುಮಾರು 150 ಕೋಟಿ ಸಾಲ ನೀಡಿದ್ದೇವೆ. ನಮ್ಮ ಜೊತೆಯಲ್ಲಿದ್ದವರು ಕೆಲವರು ಅಪಪ್ರಚಾರ ಮಾಡುತ್ತಿದ್ದರೂ ಬ್ಯಾಂಕ್ ರಾಜ್ಯದಲ್ಲಿ ಅಗ್ರಸ್ಥಾನ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ತಿಳಿಸಿದರು.

ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರು ಅವಳಿ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ಎರಡು ತಿಂಗಳ ಅವಧಿಯಲ್ಲಿ ಚುನಾವಣೆ ಎದುರಾಗಲಿದೆ. ಜನ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವನ್ನು ಹೊಂದಿದ್ದೇವೆ ಎಂದರು.

ಸಹಕಾರಿ ಸಂಘಗಳು ತನ್ನ ವ್ಯಾಪ್ತಿಯ ಪ್ರತಿಯೊಬ್ಬ ಮಹಿಳೆ, ರೈತನಿಗೂ ಸಾಲ ನೀಡಬೇಕು. ಖಾಸಗಿ ಬಡ್ಡಿ ಜಾಲದ ಕುಣಿಕೆಯಿಂದ ಅವರನ್ನು ತಪ್ಪಿಸುವ ಕೆಲಸ ಸಹಕಾರಿ ಸಂಘದಿಂದ ಆಗಬೇಕು. ಯಾರಿಗೂ ಸಾಲ ನೀಡದ ಸ್ಥಿತಿಯಲ್ಲಿದ್ದ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಇದೀಗ 21 ಕೋಟಿ ರೂಗಳಷ್ಟು ಸಾಲ ನೀಡಿದೆ ಎಂದರು.

ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಜೆ.ಎನ್.ರಾಮಚಂದ್ರಪ್ಪ ಮಾತನಾಡಿ, 2,83,20,590 ರೂಗಳಷ್ಟು ಷೇರು ಬಂಡವಾಳವನ್ನು ಸಂಘ ಹೊಂದಿದೆ. ಡಿಸಿಸಿ ಬ್ಯಾಂಕ್ ಮೂಲಕ ಕೆಸಿಸಿ, ಮಹಿಳಾ ಸ್ವಸಹಾಯ ಸಂಘಗಳಿಗೆ, ಮಧ್ಯಮಾವಧಿ ಹಾಗೂ ಕೋಳಿ ಫಾರಂಗಳಿಗೆ ಒಟ್ಟಾರೆ 24 ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ. ಎರಡೂವರೆ ಕೋಟಿ ರೂಗಳಷ್ಟು ಠೇವಣಿ ಸಂಗ್ರಹಣೆ ಮಾಡಿದ್ದೇವೆ. ಸುಮಾರು ಎರಡೂವರೆ ಕೋಟಿ ರೂಗಳಷ್ಟು ಆದಾಯವನ್ನು 2022-23 ನೇ ಸಾಲಿನಲ್ಲಿ ಸಂಘ ಗಳಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಲ ನೀಡುವ ಗುರಿಯನ್ನು ಸಂಘ ಹೊಂದಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಗುಡಿಯಪ್ಪ, ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ಹುಜಗೂರು ಎಂ.ರಾಮಯ್ಯ ಮಾತನಾಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ದೇವಿಕ, ಎಸ್.ಎಫ್.ಸಿ.ಎಸ್ ಬ್ಯಾಂಕಿನ ಉಪಾಧ್ಯಕ್ಷೆ ಎಂ.ಶೋಭಾರಾಣಿ,  ಮಾಜಿ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ನಿರ್ದೇಶಕರಾದ  ನರಸಿಂಹಮೂರ್ತಿ, ಪಿ.ಎನ್.ಪ್ರಶಾಂತ್, ಟಿ.ಎ.ನಾರಾಯಣಪ್ಪ, ಎನ್.ನರಸಿಂಹಯ್ಯ, ಪ್ರಭಾವತಿ, ನಳಿನ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೋಟಹಳ್ಳಿ ಶ್ರೀನಿವಾಸ್, ನಿರಂಜನ್, ಎಸ್.ವೆಂಕಟೇಶ್, ಡಿಸಿಸಿ ವ್ಯವಸ್ಥಾಪಕ ಆನಂದ್, ಮತ್ತಿತರರು ಉಪಸ್ಥಿತರಿದ್ದರು.




Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ