Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸರಕಾರದ ರಾಜೀನಾಮೆಗೆ ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ್ ಆಗ್ರಹ

ಬೆಂಗಳೂರು,ಅ.17: ರಾಜ್ಯದ ಕಾಂಗ್ರೆಸ್ ಸರಕಾರ ಎಡವಟ್ಟುಗಳ ಸರಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ್ ಅವರು ಟೀಕಿಸಿದರು.

ನಗರದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬಿಜೆಪಿ ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಐಟಿ ದಾಳಿ ಸಂಬಂಧ ಸಿಬಿಐ ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು. ನಾಚಿಕೆ ಇಲ್ಲದ ಸರಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ ಸರಕಾರ ಇದೆ. ಈ ಸರಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಅವರು ಆಗ್ರಹಿಸಿದರು.

ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರಿ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‍ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ.ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷರಾದ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ