Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ತಾಕೀತು : ಡಾ ಕೆ.ವಿ.ರಾಜೇಂದ್ರ

ಸುದ್ದಿಮೂಲ ವಾರ್ತೆ

ಮೈಸೂರು, ಜು.19 : ಗೃಹ ಲಕ್ಷ್ಮಿ ಯೋಜನೆಯನ್ನು ಜಿಲ್ಲೆಯಲ್ಲಿಯೂ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುತುವರ್ಜಿಯಿಂದ ಕೆಲಸಮಾಡುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದ್ದಾರೆ.

ಯೋಜನೆಯ ಅನುಷ್ಠಾನದ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 256 ಬಾಪುಜಿ ಸೇವಾ ಕೇಂದ್ರಗಳು, 222 ಗ್ರಾಮ ಓನ್ ಕೇಂದ್ರಗಳು ಹಾಗೂ 30 ಕರ್ನಾಟಕ ಒನ್ ಕೇಂದ್ರಗಳು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ 9 ವಲಯ ಕಚೇರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಕೆಲಸ ಆಗಬೇಕು ಎಂದು ತಹಸಿಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಕೊನೆ ದಿನಾಂಕ ನಿಗದಿಯಾಗಿರುವುದಿಲ್ಲ. ಮಹಿಳೆಯರು ನಿರಾತಂಕವಾಗಿ ಅವರಿಗೆ ಮೆಸೇಜ್ ಬಂದಾಗ ನಿಗದಿಪಡಿಸಿದ ದಿನಾಂಕದಂದು ಹತ್ತಿರದ ಕೇಂದ್ರಗಳಿಗೆ ಆಧಾರ್ ಕಾರ್ಡ್, ಗಂಡನ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮುಖಪುಟದ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಹೋಗಿ ನೋಂದಾಯಿಸಿಕೊಳ್ಳಬೇಕು.

ಒಂದು ವೇಳೆ ಆ ಸಮಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ಮುಂದಿನ ದಿನದ ಸಂಜೆ 5 ರಿಂದ 7 ಗಂಟೆಯವರೆಗೆ ಅಧವಾ ಮುಂದಿನ ದಿನಗಳಲ್ಲಿ ಸಂಜೆ 5 ರಿಂದ 7 ಗಂಟೆಯವರೆಗೆ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಮಾಹಿತಿ ನೀಡಿದರು.

ಈಗಾಗಲೇ ನೋಡಲ್‌ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಪ್ರಜಾ ಪ್ರತಿನಿಧಿಗಳ ಆಯ್ಕೆ ಪೂರ್ಣಗೊಳಿಸಿ, ನೋಂದಾವಣೆ ಪ್ರಕ್ರಿಯೆಯಲ್ಲಿ ಜನಪ್ರತಿನಿಧಿಗಳು ದುಡ್ಡು ತೆಗೆದುಕೊಳ್ಳುವಂತಿಲ್ಲ. ಆ ರೀತಿ ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ಕೆ.ಎಂ ಗಾಯತ್ರಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಮ್, ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತೆ ರೂಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ. ಬಸವರಾಜು ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹ ನಿರ್ದೇಶಕ ಟಿ. ಹರೀಶ್ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ