Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಪರಿವರ್ತನೆಗೆ ಪೂರಕವಾದ ಸ್ತಬ್ಧಚಿತ್ರ : ಸಚಿವ ಡಾ.ಮಹದೇವಪ್ಪ

ಸುದ್ದಿಮೂಲ ವಾರ್ತೆ

ಮೈಸೂರು, ಅ.3:ಸಮಾಜದ ಪರಿವರ್ತನೆಗೆ ಅನುಕೂಲವಾಗುವಂಥ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.

ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣವಾದ ಸ್ತಬ್ಧಚಿತ್ರಗಳನ್ನು ದಸರಾ ಉತ್ಸವದ ಮೆರವಣಿಗೆಗೆ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಕಲೆ ಎಂಬುದು ಒಂದು ಸೃಜನಶೀಲ ಕ್ರಿಯೆಯಾಗಿದ್ದು, ಜನರ ಮನಸ್ಸಿಗೆ ಮುದ ನೀಡುವ ಹಾಗೂ ಪ್ರಫುಲ್ಲವಾಗಿಸುವ ಶಕ್ತಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಚರಿತ್ರೆ, ಸ್ವಾತಂತ್ರ್ಯ ಹೋರಾಟ, ಸಾಂಸ್ಕೃತಿಕ ಬದುಕು, ಸಂಗೀತ, ಸಾಹಿತ್ಯ ಸೇರಿದಂತೆ ಸಾಮಾಜಿಕ ಸಂದೇಶ ನೀಡುವ ಸ್ತಬ್ಧಚಿತ್ರಗಳು ಅಗತ್ಯ ಎಂದು ಹೇಳಿದರು.

ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯದ ಪರ ಆಡಳಿತ ನಡೆಸಿದರು‌. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟವನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದವು ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ