Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಪಡೆದು ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲಿ : ಡಾ. ಮಹದೇವಪ್ಪ


ಸುದ್ದಿಮೂಲ ವಾರ್ತೆ

ಮೈಸೂರು, ಅ.16 : ಮಹಿಳೆಯರು ಸರ್ಕಾರದ ಯೋಜನೆಗಳು ಹಾಗೂ ಕಡ್ಡಾಯ ಶಿಕ್ಷಣದ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಎ.ಸಿ ಮಹದೇವಪ್ಪ ಕಿವಿಮಾತು ಹೇಳಿದರು.




ಸೋಮವಾರ ನಗರದ ಜೆ.ಕೆ ಮೈದಾನದಲ್ಲಿ ಮಹಿಳಾ ದಸರಾ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಶಿಕ್ಷಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಸಾವಿತ್ರಿ ಬಾಪುಲೆ ಮತ್ತು ಜ್ಯೋತಿ ಬಾಪುಲೆ ಮಹಿಳೆಯರ ವಿರುದ್ಧದ ದೌರ್ಜನ್ಯವನ್ನು ಖಂಡಿಸಿ ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದರು ಎಂದು ಹೇಳಿದರು.


17 ಶತಮಾನದಲ್ಲಿ ಬಸವಣ್ಣನವರು ಲಿಂಗ ತಾರತಮ್ಯದ ವಿರುದ್ಧ ಹೋರಾಡಿ  ಸ್ವಂತ ಮನೆಯನ್ನು ಬಿಟ್ಟು ಹೊರ ನಡೆದರು. ಅದೇ ರೀತಿಯಾಗಿ ಮಹಿಳೆಯರ ಸಮಾನತೆಗಾಗಿ ತಮ್ಮ ಕಾನೂನು ಮಂತ್ರಿ ಪದವಿಯನ್ನೇ ತ್ಯಾಗ ಮಾಡಿದ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಈ ಸಮಯದಲ್ಲಿ ನೆನೆದ ಸಚಿವರು, ಈಗ ಮಹಿಳೆಯರು ಅಭಿವೃದ್ಧಿಯತ್ತ ಸಾಗುತ್ತಿದ್ದಾರೆ. ಮಹಿಳೆಯರಲ್ಲಿ ಅನೇಕ ಪ್ರತಿಭೆಗಳಿವೆ ಅದನ್ನು ಅವಕಾಶ ಮತ್ತು ವೇದಿಕೆ ಸಿಕ್ಕಾಗ ತೆರೆದಿಡುವ ಪ್ರಯತ್ನ ಮಾಡಬೇಕು ಎಂದರು.


ಮಾರಾಟ ಮೇಳ
ಮಹಿಳಾ ದಸರಾ ಪ್ರಯುಕ್ತ, ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ವಸ್ತು ಪ್ರದರ್ಶನ ಮಾರಾಟ ಮೇಳವನ್ನು ಹಾಗೂ ಮಳಿಗೆಗಳನ್ನು  ಉದ್ಘಾಟಿಸಿದ ಸಚಿವರು ಎಲ್ಲಾ ಮಳಿಗೆಗಳಿಗೂ ಭೇಟಿ ನೀಡಿ ಮಹಿಳೆಯರಿಗೆ ಶುಭಾಶಯ ಕೋರಿದರು.


ಮೇಯರ್‌ ಶಿವಕುಮಾರ್ ಮಾತನಾಡಿ, ಮಹಿಳಾ ದಸರಾ ಕಾರ್ಯಕ್ರಮವು ಮಹಿಳೆಯರ ಅಭಿವೃದ್ಧಿ ಪೂರಕವಾಗಿದೆ. ಮಹಿಳೆಯರು ಆರ್ಥಿಕವಾಗಿ ಮುಂದೆ ಬಂದು ಸ್ವಭಾವಲಂಬಿಯಾಗಿ ಬದುಕಬೇಕು. ಅದು ದೇಶದ ಆರ್ಥಿಕತೆಗೂ ಕೂಡ ಸಹಾಯವಾಗುತ್ತದೆ. ಈಗಿನ ಮಹಿಳೆಯರು ಗುಡಿ ಕೈಗಾರಿಕೆ ಕ್ಷೇತ್ರದಲ್ಲಷ್ಟೇ ಅಲ್ಲದೆ ಕಾರ್ಪೊರೇಟ್ ಕ್ಷೇತ್ರದಲ್ಲೂ ಹೆಸರು ಮಾಡುತ್ತಿರುವುದು ಸಂತಸದ ವಿಷಯ. ಹೀಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಖ್ಯ ವಾಹಿನಿಗೆ ಬರಬೇಕು. ಮಹಿಳೆಯರು ಮಹಿಳಾ ದಸರಾ ಪ್ರಯುಕ್ತ ಆಯೋಜಿಸಿರುವ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುವಂತೆ ಉತ್ತೇಜನ ನೀಡಿದರು.


ಕಾರ್ಯಕ್ರಮದಲ್ಲಿ  ಉಪಮೇಯರ್  ಡಾ. ರೂಪ, ನಗರ ಪಾಲಿಕೆ  ಸದಸ್ಯೆ ಪ್ರಮೀಳಾ ಭರತ್ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ಅಧ್ಯಕ್ಷೆ ಸುಧಾ ಮದೇವಯ್ಯ, ಹುಣಸೂರು ಉಪ ವಿಭಾಗಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ವಿಶೇಷಾಧಿಕಾರಿದ ರುಚಿ ಬಿಂದಾಲ್ ಇತರರು  ಇದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ