Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಸುಧಾಕರ್, ಎಸ್‌.ಟಿ. ಸೋಮಶೇಖರ್ ಗಂಭೀರ ಆರೋಪ ನಾವು ಪಕ್ಷಾಂತರ ಮಾಡಲು ಸಿದ್ದರಾಮಯ್ಯ ಕಾರಣ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 17: ಕಳೆದ 2019 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ದರಾಮಯ್ಯ ಕಾರಣ ಎಂದು ಹಲವು ಮಂದಿ ಬಿಜೆಪಿ ಮುಖಂಡರು ಇದೀಗ ಸಿದ್ದರಾಮಯ್ಯ ವಿರುದ್ಧ ಕಲ್ಲೆಸೆಯುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಆಗ ಕೈ ಪಾಳೆಯ ತೊರೆದು ಹೊರಬಂದ ನಾಯಕರು ಒಬ್ಬೊಬ್ಬರೇ ಈಗ ಸ್ಫೋಟಕ ಹೇಳಿಕೆ ನೀಡುತ್ತಿದ್ದಾರೆ. 2019ರಲ್ಲಿ ಕಾಂಗ್ರೆಸ್ ತೊರೆಯಲು ಸಿದ್ದರಾಮಯ್ಯ ಧೋರಣೆ, ನಾವು ಸಹಾಯ, ಸಹಕಾರ ಕೇಳಲು ಹೋದಾಗ ಅಸಹಾಯಕತೆ ತೋರಿಸುತ್ತಿದ್ದ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಇಂದು ಮುಖ್ಯಮಂತ್ರಿಯಾಗಲು ಸಿದ್ಧರಾಗಿರುವ ಸಿದ್ದರಾಮಯ್ಯ ಅವರೇ ಕಾರಣ ಎಂದು ಟ್ವೀಟ್ ಮೂಲಕ ಮಾಜಿ ಸಚಿವ ಮಾಜಿ ಸಚಿವ ಡಾ ಸುಧಾಕರ್ ಬೇಸರ ಹೊರಹಾಕಿದ್ದರು.

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ್ ಆರೋಪ ಮಾಡಿದ್ದಾರೆ.

ಅದೇ ವರಸೆಯಲ್ಲಿ ಟ್ವೀಟ್ ಮಾಡಿದ್ದಾರೆ ಮಾಜಿ ಸಚಿವ ಶಾಸಕ ಎಸ್ ಟಿ ಸೋಮಶೇಖರ್. 2018-19ರಲ್ಲಿ ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ನಾವು ಶಾಸಕರು ಸಿದ್ದರಾಮಯ್ಯ ಅವರ ಮುಂದೆ ಸಮಸ್ಯೆ ಹೇಳಿಕೊಳ್ಳಲು ಹೋದರೆ ಸಿದ್ದರಾಮಯ್ಯನವರು ಅಸಹಾಯಕತೆ ತೋರಿಸಿಕೊಳ್ಳುತ್ತಿದ್ದರು. ಅವರ ಅಸಹಾಯಕತೆಯೇ ನಾವು ಪಕ್ಷ ಬಿಡಲು ಪ್ರೇರಣೆಯಾಯಿತು ಎಂದು ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.

ಬಾಕ್ಸ್..
ಸುಧಾಕರ್ ಪ್ರಮಾಣ ಮಾಡುತ್ತಾರಾ?: ಎಂಟಿಬಿ ನಾಗರಾಜ್

ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಮಾಜಿ ಸಚಿವ ಸುಧಾಕರ್ ಇಂದು ಸಿದ್ದರಾಮಯ್ಯ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ.

ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ತಾವು ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ಅವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ