Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬಕ್ಕೆ ಇಬ್ಬರು ಮಕ್ಕಳು ಸಾಕು: ಡಾ. ವಿಜಯೇಂದ್ರ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 11 : ಸೂಕ್ತ ಅರಿವಿನ ಕೊರತೆಯಿಂದ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಬಡತನ, ನಿರುದ್ಯೋಗ ಸಮಸ್ಯೆ, ಶಿಕ್ಷಣ, ಆರೋಗ್ಯ, ಸೇವೆ ಮತ್ತು ಇತರೆ ಸಂಪನ್ಮೂಲಗಳ ಸೇವೆಗಳಿಗೆ ಕೊರತೆ ಉಂಟಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ತಿಳಿಸಿದರು.

ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿ.ಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯರ್ಕಮ ಉದ್ಘಾಟಿಸಿ ಮಾತನಾಡಿದರು.

ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಂತಾನ ನಿಯಂತ್ರಣಕ್ಕೆ ಮಾತ್ರೆ ಹಾಗೂ ಚುಚ್ಚುಮದ್ದುಗಳಿಂದ ಇದನ್ನು ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು. ಜನಸಂಖ್ಯೆ ಸ್ಥಿರತೆಯಿಂದ ದೇಶದ ಪ್ರಗತಿ ಸಾಧ್ಯವಾಗಿದ್ದು ಜನಸಂಖ್ಯಾ ಸ್ಥಿರತೆಯನ್ನು ಸಾಧಿಸಲು ಆರೋಗ್ಯ ಇಲಾಖೆಯಕುಟುಂಬ ಕಲ್ಯಾಣ ವಿಧಾನಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಸೀಮಾ ಮಾತನಾಡಿ, ಜನಸಂಖ್ಯಾ ಸ್ಪೋಟದಿಂದ ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತೀಯ ಹೊಸ ಅಧ್ಯಾಯ ಬರೆಯುವ ಮೂಲಕ ಜನಸಂಖ್ಯಾ ನಿಯಂತ್ರಣ ಮಾಡಬೇಕು. ಈ ಎಲ್ಲಾ ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ದೊರೆಯುತ್ತದೆ. ಇದರೊಂದಿಗೆ ಆರ್ಥಿಕ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್ ಮಾತನಾಡಿ, ಸುಧಾರಿತ ಮತ್ತು ಗುಣಾತ್ಮಕ ವೈದ್ಯಕೀಯ ಸೇವಾ ಸೌಲಭ್ಯಗಳನ್ನು ಪಡೆಯುವ ಮೂಲಕ ಪ್ರತಿಕುಟುಂಬವೂ ಒಂದು ಆಥವಾ ಎರಡು ಮಕ್ಕಳಿಗೆ ಸೀಮಿತವಾಗಬೇಕು. ಈ ಹಿಂದೆ ಒಂದು ಮನೆಗೆ 8-10 ಜನ ಮಕ್ಕಳು ಇರುತ್ತಿದ್ದರು. ಅದರಲ್ಲೂ ಮುಸಲ್ಮಾನರಲ್ಲಿ ಹೆಚ್ಚು ಮಕ್ಕಳನ್ನು ನೋಡುತ್ತಿದ್ದೆವು. ಕುಟುಂಬ ಯೋಜನೆ ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಾರಂಭಿಸಿದ ವಿಶ್ವದ ಮೊದಲ ದೇಶ ಭಾರತವಾಗಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಐಇಸಿ ವಿಭಾಗದ ಅಧಿಕಾರಿ ಗೋವಿಂದರಾಜು, ಜಿಲ್ಲಾ ಅರೋಗ್ಯಾಧಿಕಾರಿ ಕಚೇರಿಯ ಸಿಎಂಡಿ ಮೋಹನ್‌ಕುಮಾರ್., ತಾಲೂಕು ಆರೋಗ್ಯ ಸಹಾಯಕ ವೆಂಕಟೇಶ್ ಮತ್ತಿತರರು ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ