Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಬ್ರ್ಯಾಂಡ್ ಬೆಂಗಳೂರು' ಪೋರ್ಟಲ್‌ಗೆ ಚಾಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.21: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ರೂಪಿಸಲಾದ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಲು ಪೋರ್ಟಲ್ ಆರಂಭಿಸಲಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ವಿಕಾಸಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ www.brandbengaluru.karnataka.gov.in ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಬೆಂಗಳೂರಿನ ನಾಗರೀಕರು ಹಾಗೂ ವಿವಿಧ ರಾಜ್ಯ ಮತ್ತು ಹೊರದೇಶಗಳಲ್ಲಿ ಇರುವಂತಹ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು ನಿಗದಿತ ಕಾಲಮಿತಿ ಜೂನ್ 30 ರ ಒಳಗಾಗಿ ವೆಬ್‌ಸೈಟ್ ಮೂಲಕ ದಾಖಲಿಸಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ನನಗೆ ಸಾರ್ವಜನಿಕರ ಅಭಿಪ್ರಾಯ ಬಹಳ ಮುಖ್ಯ. ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದೇನೆ. ಬೆಂಗಳೂರಿನ ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಇವರ ಜತೆಗೆ ಸಾರ್ವಜನಿಕರ ಅಭಿಪ್ರಾಯವೂ ಮುಖ್ಯ. ಹೀಗಾಗಿ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ ಎಂದರು.

ಇತ್ತೀಚೆಗೆ ನಡೆಸಲಾದ ಶಾಸಕರು, ಅಧಿಕಾರಿಗಳು, ಪ್ರಮುಖ ನಗರ ರಾಯಭಾರಿಗಳ ಸಭೆಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈಡೆನ್ಸಿಟಿ ಕಾರಿಡಾರ್, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣದಂತಹ ಸಲಹೆ ನೀಡಿದ್ದಾರೆ.

ಸ್ವಚ್ಛತೆ, ಪರಿಸರ ವಿಚಾರದಲ್ಲಿ ಕಸ ವಿಲೇವಾರಿ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಕೊಳಗೇರಿ ಪ್ರದೇಶ ಅಭಿವೃದ್ಧಿ ಸೇರಿದಂತೆ ದಕ್ಷ ಆಡಳಿತ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಕೆಲವು ದೊಡ್ಡ ನಾಯಕರ ಮನೆಗೆ ಹೋಗಿ ಚರ್ಚೆ ಮಾಡಲು ತೀರ್ಮಾನಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಇನ್ನು ಕೆಲವರನ್ನು ಭೇಟಿ ಮಾಡಬೇಕು. ಬೊಮ್ಮಾಯಿ ಅವರ ಸಮಯ ಕೇಳಿದ್ದು, ಅವರು ಬ್ಯುಸಿ ಇದ್ದ ಕಾರಣ ಭೇಟಿ ಮಾಡಿಲ್ಲ. ಅವರ ವಿಚಾರಧಾರೆಗಳನ್ನು ತಿಳಿಯಬೇಕು ಎಂದು ಹೇಳಿದರು.

ಬೆಂಗಳೂರಿನ ಸಂಚಾರದಟ್ಟಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಬೇರೆ ನಗರಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾರಣ ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ. ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಗಮನ ಹರಿಸಬೇಕು. ಸಂಚಾರ ದಟ್ಟಣೆ ವಿಚಾರವಾಗಿ ನಿವೃತ್ತ ಟ್ರಾಫಿಕ್ ಪೊಲೀಸರ ಅಭಿಪ್ರಾಯ ಪಡೆಯುತ್ತೇನೆ. ಅನುಭವದ ಆಧಾರದ ಮೇಲೆ ಬರುವ ಸಲಹೆಗಳಿಗೆ ಹೆಚ್ಚಿನ ತೂಕ ಇರುತ್ತದೆ ಎಂದರು.

ರಾಜಕೀಯ ಇಚ್ಛಾಶಕ್ತಿ ಮುಖ್ಯ:

ರಸ್ತೆ ಗುಂಡಿ ವಿಚಾರವಾಗಿ ಪ್ರತ್ಯೇಕ ಯೋಜನೆ ರೂಪಿಸುತ್ತೇವೆ. ತ್ಯಾಜ್ಯ ವಿಲೇವಾರಿ ಕುರಿತು ಅಧಿಕಾರಿಗಳ ಸಭೆ ಮಾಡಿದ್ದೇನೆ. ಈ ಬಗ್ಗೆ ಉತ್ತಮ ನಿರ್ವಹಣೆ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಲು ತೀರ್ಮಾನಿಸಿದ್ದೇವೆ. ಚೆನ್ನೈ, ಇಂದೋರ್ ಸೇರಿದಂತೆ ಅನೇಕ ಕಡೆಗಳಲ್ಲಿ ಉತ್ತಮ ತ್ಯಾಜ್ಯ ನಿರ್ವಹಣೆ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾವು ಈ ವಿಚಾರದಲ್ಲಿ ದೀರ್ಘಾವಧಿಯ ಯೋಜನೆ ರೂಪಿಸಿಕೊಳ್ಳಬೇಕು. ಕಾನೂನು ಮಿತಿ, ಭೂಪ್ರದೇಶದ ಮಿತಿಯಲ್ಲಿ ನಾವು ಯೋಜನೆ ರೂಪಿಸಬೇಕು.

ಕೇವಲ ಕಸ ತೆಗೆದುಕೊಂಡು ಹೋಗಿ ಸುರಿದರೆ ಆಗುವುದಿಲ್ಲ. ತ್ಯಾಜ್ಯದ ಬೆಟ್ಟ ನಿರ್ಮಿಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇದು ಒಂದು ದಿನ ಅಥವಾ ವರ್ಷದಲ್ಲಿ ಬದಲಾವಣೆ ತರಲು ಆಗುವುದಿಲ್ಲ. ಆದರೂ ಕಾಲಮಿತಿ ನಿಗದಿ ಮಾಡಿಕೊಂಡು ಕೆಲಸ ಮಾಡಬೇಕಿದೆ. ಎಂದರು.

ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ಇದೆ. 50 ಲಕ್ಷದಷ್ಟು ಮಂದಿ ಬೆಂಗಳೂರಿಗೆ ಬಂದು ಹೋಗುತ್ತಿದ್ದಾರೆ. ರಾಜ್ಯ ಹಾಗೂ ದೇಶಕ್ಕೆ ಬೆಂಗಳೂರಿನಿಂದ ಹೆಚ್ಚಿನ ಪ್ರಮಾಣದ ಹಣ ತೆರಿಗೆ ರೂಪದಲ್ಲಿ ಹೋಗುತ್ತಿದೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದವರು ಮತ್ತೆ ತಮ್ಮ ಊರಿಗೆ ಹೋಗುತ್ತಿಲ್ಲ. ಇಲ್ಲೇ ನೆಲೆಸುತ್ತಿದ್ದಾರೆ.

ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ಬೆಂಗಳೂರಿನ ಹೊರೆ ತಪ್ಪಿಸಲು 2-3ನೇ ದರ್ಜೆ ನಗರಗಳ ಅಭಿವೃದ್ಧಿ, ಎಲ್ಲಾ ಪಂಚಾಯಿತಿ ಮಟ್ಟದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಹೇಳಿದರು.

ಬೆಂಗಳೂರಿನ ಅನೇಕ ಕಡೆಗಳಲ್ಲಿ ಕೆಬಲ್ ಗಳ ರಾಶಿ ಕುರಿತು ಕೇಳಿದ ಪ್ರಶ್ನೆಗೆ, ‘ನಾನು ಇಂಧನ ಸಚಿವನಾಗಿದ್ದಾಗ ಕೇಬಲ್ ಹಾವಳಿ ನೋಡಿದ್ದೇವೆ. ತಮ್ಮನ್ನು ಯಾರೂ ಮುಟ್ಟಲು ಆಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಈ ಬಗ್ಗೆ ಆಲೋಚನೆ ಮಾಡಲಾಗುತ್ತಿದ್ದು, ಮಾಧ್ಯಮಗಳು ಸಹಕಾರ ನೀಡಿದರೆ ಎಲ್ಲ ಕೇಬಲ್ ಕಟ್ ಮಾಡಿಸುತ್ತೇನೆ’ ಎಂದು ತಿಳಿಸಿದರು.

ಟೆಂಡರ್ ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿದಾಗ, ‘ಅವರು ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನು ಬಿಚ್ಚಿಡುತ್ತೇನೆ. ನಾನು ಅವರ ಸಲಹೆ ಕೇಳುತ್ತಿದ್ದೇನೆ. ಆರ್ ಆರ್ ನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎಯಲ್ಲೂ ಎಸ್ಐಟಿ ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಚರ್ಚೆ ಮಾಡೋಣ’ ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಅವರು ತಡ ಮಾಡದೇ ಲೋಕಾಯುಕ್ತಕ್ಕೆ ದೂರು ನೀಡಲಿ’ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ