ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಚಾಲನೆ
ಮಡಿಕೇರಿ ಅ.15:ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಭಾನುವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು.
ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ದಂಡಿನ ಮಾರಿಯಮ್ಮ ದೇವಾಲಯ, ಕೋಟೆ ಮಾರಿಯಮ್ಮ ದೇವಾಲಯ ಮತ್ತು ಕಂಚಿ ಕಾಮಾಕ್ಷಿ ದೇವಾಲಯಗಳ ಕರಗವನ್ನು ನಗರದ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಕರಗ ಉತ್ಸವಕ್ಕೆ ಚಾಲನೆ ನೀಡಲಾಯಿತು.
ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯ ಕರಗವನ್ನು ಅನೀಸ್ ಮತ್ತು ಕಂಚಿ ಕಾಮಾಕ್ಷಿ ದೇವಾಲಯದ ಕರಗವನ್ನು ಕಾರ್ತಿಕ್ ಅವರು ಹೊತ್ತಿದ್ದರು. ನಂತರ ಕರಗ ಪ್ರದಕ್ಷಿಣೆ ಜರುಗಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ, ವೇದಿಕೆ ಸಮಿತಿ ಅಧ್ಯಕ್ಷರಾದ ಕವಿತಾ, ಸ್ವಾಗತ ಸಮಿತಿ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ, ದಸರಾ ಸಮಿತಿ ಗೌರವ ಅಧ್ಯಕ್ಷರಾದ ಜಿ.ರಾಜೇಂದ್ರ, ಗೌರವ ಸಲಹೆಗಾರರಾದ ಜಿ.ಚಿದ್ವಿಲಾಸ್, ಖಜಾಂಜಿ ಅರುಣ್ ಶೆಟ್ಟಿ, ನಗರಸಭಾ ಸದಸ್ಯರು, ಇತರರು ಇದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.