Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ, ಕೆ.ಆರ್.ಪುರ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಬರ ವಿ.ಎಸ್.ಮೌರ್ಯ





ಸುದ್ದಿಮೂಲ ವಾರ್ತೆ


ಕೆ.ಆರ್.ಪುರ ಸೆ.10:ಮಹದೇವಪುರ ಮತ್ತು ಕೆ.ಆರ್.ಪುರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಉಂಟಾಗಿ ಸಾರ್ವಜನಿಕರು ಹಣಕೊಟ್ಟು ನೀರು ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ಟ್ರ್ಯಾಕ್ಟರ್ ಮತ್ತು ಲಾರಿ ಟ್ಯಾಂಕರ್ ನೀರಿಗೆ ಮೊರೆ ಹೋಗುತ್ತಿದ್ದಾರೆ.

ಕೆ.ಆರ್.ಪುರದ ಸುತ್ತಮುತ್ತಲಿನ ಪ್ರದೇಶಗಳ ರಾಮಮೂರ್ತಿನಗರ, ಕಲ್ಕೆರೆ, ಹೊರಮಾವು, ಎನ್.ಆರ್.ಐ.ಬಡಾವಣೆ ಹಾಗೂ ಮಹದೇವಪುರದ ಬೆಳ್ಳಂಡೂರು, ಬೈರತಿ, ಕಾಡುಬಿಸನಹಳ್ಳಿ, ತುಬರಹಳ್ಳಿ, ಮುನ್ನೆಕೊಳಲು, ಬೆಳ್ಳಂಡೂರು ಅಂಬಲಿಪುರ, ದೊಡ್ಡಕನ್ನಹಳ್ಳಿ, ಹರಳೂರು, ಕಸವನಹಳ್ಳಿ, ಬೋಗನಹಳ್ಳಿ, ವರ್ತೂರು ಮುಂತಾದ ಭಾಗಗಳಲ್ಲಿ ನೀರಿನ ಬವಣೆ ಹೆಚ್ಚಿದೆ.

ಮಳೆಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲು ಅಂತರ್ಜಲ ಕುಸಿತ ಕಂಡಿರುವ ಕಾರಣವಾಗಿದೆ. ಕೆ.ಆರ್.ಪುರ ಮತ್ತು ಮಹದೇವಪುರ ವ್ಯಾಪ್ತಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ. ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳ ಪೈಕಿ ಮನೆಮನೆ ನೀರು ಒದಗಿಸುವ ಯೋಜನೆಯಾದ ಕಾವೇರಿ ನೀರಿನ ಯೋಜನೆ ಪೂರ್ಣಗೊಳ್ಳದೆ ಇರುವುದು ನೀರು ಸಮಸ್ಯೆ ಉಂಟಾಗಲು ಕಾರಣವಾಗಿದೆ.

ಒಂದೆಡೆ ಕೊಳವೆಬಾವಿಗಳ ನೀರಿಲ್ಲದೆ ಇತ್ತ ಕಾವೇರಿ ನೀರಿಲ್ಲದೆ ಅನಿವಾರ್ಯವಾಗಿ ಒಂದು  ಟ್ಯಾಂಕರ್ ಗೆ 500ರಿಂದ 600 ರೂ ಹಣ ಕೊಟ್ಟು ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಈಗ ಟ್ಯಾಂಕರ್ ನೀರಿಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ, ಇದ್ದಕ್ಕಿದ್ದಂತೆ ಟ್ಯಾಂಕರ್ ನೀರಿನ ಬೆಲೆ ಹೆಚ್ಚಾಗಿರುವುದು ಜನರಿಗೆ ತಲೆನೋವಾಗಿ ಪರಿಣಮಿಸಿದೆ.  ಹಲವು ಕಡೆಗಳು ಕೊಳವೆಬಾವಿಗಳಲ್ಲಿ ನೀರಿಲ್ಲದೆ ಕೆಟ್ಟು ನಿಂತಿರುವ ಪರಿಣಾಮ ನೀರಿನ ಸಮಸ್ಯೆ ತೀವ್ರವಾಗಿ ಕಾಡತೊಡಗಿದೆ ಎಂದು ಪೂಜಾ ಗಾರ್ಡನ್ ನಿವಾಸಿ ಮಂಜುಳಾ ಹೇಳಿದರು.

ಬಿಬಿಎಂಪಿ ಅಧಿಕಾರಿಗಳು  ನೀರಿನ ಸಮಸ್ಯೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳದೆ ಹಾರಿಕೆ ಉತ್ತರ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ. ಹದಿನೈದು ದಿನಗಳಿಂದ ನಮ್ಮ ಬಡಾವಣೆಗಳಿಗೆ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ನೀರಿನ ಸಮಸ್ಯೆ ಬಗ್ಗೆ  ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜವಾಗುತ್ತಿಲ್ಲ ಎಂದರು.

ಕೆಲ ತಿಂಗಳಿನಿಂದ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಕೆಲವೊಂದು  ಬಡಾವಣೆಗಳಿಗೆ ಮಾತ್ರ ನೀರು ಬಿಡುತ್ತಿದ್ದಾರೆ. ಬೇರೆ ವಿಧಿಯಿಲ್ಲದೆ ಟ್ಯಾಂಕರ್ ನೀರು ಖರೀದಿಸುವ ಅವಲಂಬಿಸಬೇಕಾದ   ಪರಿಸ್ಥಿತಿಯಲ್ಲಿದ್ದೇವೆ. ಕೊಳವೆಬಾವಿಗಳಲ್ಲಿ ನೀರು ಬತ್ತಿದ ಪರಿಣಾಮ ನೀರಿನ ಸಮಸ್ಯೆ ಉಂಟಾಗಿದೆ ಅದಷ್ಟು ಬೇಗ ನೀರಿನ ಸಮಸ್ಯೆ ಬಗೆಹರಿಸಿ ನೀರು ಪೂರೈಕೆ ಮಾಡಬೇಕಿದೆ ಎಂದು ಮುನ್ನೆಕೊಳಲು ನಿವಾಸಿ ದಿಲೀಪ್ ಹೇಳಿದರು.

ಸಾರ್ವಜನಿಕರಿಗೆ ಕುಡಿಯುವ ನೀರು ದೊರಕದಿರುವ ಕುರಿತು ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಕೊಳವೆ ಬಾವಿಗಳು ಬತ್ತುವ ಸ್ಥಿತಿಗೆ ಬಂದಿವೆ. ಟ್ಯಾಂಕರ್ ನೀರಿಗೆ ಮೊರೆ ಹೋಗಿರುವ ಜನರು ದುಂದು ವೆಚ್ಚ ಮಾಡಿ ನೀರು ಖರೀದಿಸುತ್ತಿದ್ದಾರೆ. ಇನ್ನೂ ಕೆಲದಿನಗಳಲ್ಲಿ ಇರುವ ಕೆಲವು ಕೊಳವೆ ಬಾವಿ ನೀರು ಬತ್ತಿದರೆ ಟ್ಯಾಂಕರ್ ನೀರು ಸರಬರಾಜು ನಿಲ್ಲುತ್ತದೆ ಮತ್ತಷ್ಟು ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಮಹದೇವಪುರ, ಅಪ್ ಮುಖಂಡ ಮುನೇಂದ್ರ, ಹೇಳಿದರು.




Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ