Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಬರ ಅಧ್ಯಯನ ತಂಡದಿಂದ ಬರ ಪರಿಸ್ಥಿತಿ ವೀಕ್ಷಣೆ

ಸುದ್ದಿಮೂಲ ವಾರ್ತೆ

ತುಮಕೂರು,ಅ.6: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಪರಿಶೀಲಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕ ವಿ. ಅಶೋಕ್ ಕುಮಾರ್ ಅವರ ನೇತೃತ್ವದ ತಂಡ ಶುಕ್ರವಾರ ಜಿಲ್ಲೆಯ ವಿವಿದೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಕ್ಷೇತ್ರ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿತು.



ತಂಡವು ಮೊದಲಿಗೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೈರೇನಹಳ್ಳಿ ಗ್ರಾಮದ ಸರ್ವೆ ನಂಬರ್ 67/3ರ ನಾಗೇಂದ್ರ ಕುಮಾರ್ ಅವರು 1.14 ಎಕರೆ ಭೂಮಿಯಲ್ಲಿ ಬಿತ್ತನೆ ಮಾಡಿರುವ ಶೇಂಗಾ, ತೊಗರಿ, ಅಲಸಂದೆ, ಜೋಳದ ಬೆಳೆಯನ್ನು ಪರಿಶೀಲಿಸಿತು. ರೈತ ನಾಗೇಂದ್ರಕುಮಾರ್ ಅವರು ನಾನು ಉಳುಮೆ ಮಾಡಿ ಬಿತ್ತನೆ ಮಾಡುವುದಕ್ಕೆ 40000 ರೂ. ಖರ್ಚಾಗಿದೆ. ಸರಿಯಾದ ಸಮಯಕ್ಕೆ ಮಳೆ ಬಾರದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಬೆಳೆ ನಷ್ಟವಾಗಿದೆ. ಇದರಿಂದ ದನಕರುಗಳಿಗೆ ಮೇವು ಸಹ ಆಗುವುದಿಲ್ಲ ಎಂದು ತಮ್ಮ ಅಳಲನ್ನು ಹೇಳಿದರು. ಅದೇ ಗ್ರಾಮದ ಸರ್ವೇ ನಂಬರ್ 67/2ರ ಭಾಗ್ಯಮ್ಮ ಅವರಿಗೆ ಸೇರಿದ 1.14 ಎಕರೆ ಕೃಷಿ ಭೂಮಿಯಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದು, ಮಳೆ ಕೊರತೆಯಿಂದ ಬೆಳೆ ನಷ್ಟವಾಗಿರುವುದನ್ನು ಪರಿಶೀಲಿಸಿ ರೈತರಿಗೆ ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ನಂತರ ಮಧುಗಿರಿ ತಾಲ್ಲೂಕಿನ ಮಾಡಗಾನಹಟ್ಟಿ ಗ್ರಾಮದ ಸರ್ವೆ ನಂಬರ್ 13/1ರ ತಿಪ್ಪೇನರಸಯ್ಯ ಅವರಿಗೆ ಸೇರಿದ ಎರಡು ಎಕರೆ ಕೃಷಿ ಭೂಮಿಯಲ್ಲಿ ಶೇಂಗಾ ಬೆಳೆಯನ್ನು ಪರಿಶೀಲಿಸಿದರು.

ತಾಲೂಕಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಬೇಕು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಮಾತ್ರ ಕಾಮಗಾರಿಗಳನ್ನು ಮಾಡುವುದಕ್ಕೆ ಅವಕಾಶ ಕಲ್ಪಿಸಿ ಕೊಡಬಾರದು ಎಂದು ರೈತರು ಈ ಸಂದರ್ಭ ಕೇಳಿಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಬರ ಪರಿಶೀಲನಾ ತಂಡವು ಕೊರಟಗೆರೆ, ಮಧುಗಿರಿ, ಶಿರಾ ತಾಲ್ಲೂಕುಗಳ ಆಯ್ದ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶೇ.69ರಷ್ಟು ಬಿತ್ತನೆಯಾಗಿದ್ದು, ಶೇ.73ರಷ್ಟು ಬೆಳೆ ಹಾನಿಯಾಗಿದ್ದು, ಒಟ್ಟಾರೆ 1880 ಕೋಟಿ ನಷ್ಟವಾಗಿದ್ದು, ಇಳುವರಿ ಪ್ರಮಾಣ ಕೂಡ ಕಡಿಮೆಯಾಗಿದೆ ಎಂದು ತಿಳಿಸಿದರು. ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಸಣ್ಣ ಮತ್ತು ಮಧ್ಯಮ ರೈತರಿಗೆ ಒಂದು ಹೆಕ್ಟೇರ್‌ಗೆ ಬೆಳೆ ನಷ್ಟಕ್ಕೆ 8,500 ರೂ. ಪರಿಹಾರದಂತೆ ಒಟ್ಟು 148 ಕೋಟಿ ರೂ. ಪರಿಹಾರ ನೀಡಲಾಗುವುದು. ರೈತರ ಮನವಿಯ ಮೇರೆಗೆ ಹೆಚ್ಚುವರಿ ಪರಿಹಾರ ಮೊತ್ತಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ 3,14,630 ಹೆಕ್ಟೇರ್‌ನಲ್ಲಿ 2,19,554 ಹೆಕ್ಟೇರ್‌ನಷ್ಟು ಬಿತ್ತನೆಯಾಗಿದ್ದು, ಕುಂಠಿತ ಮಳೆಯಿಂದ ಶೇ. 30ರಷ್ಟು ಬಿತ್ತನೆ ಕಡಿಮೆಯಾಗಿದೆ ಹಾಗೂ ಒಣ ಪರಿಸ್ಥಿತಿಯಿಂದ 1,80,422 ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದ್ದು, ಒಟ್ಟು 1,08,622.06 ರೂ.ಗಳಷ್ಟು ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಎಂ.ಎನ್.ಸಿ.ಎಫ್.ಸಿ. ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕರಣ್ ಚೌದರಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ