Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್‌ ವಶ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.22 : ಸಿಲಿಕಾನ್‌ ಸಿಟಿ ಬೆಂಗಳೂರಿನ ದೊಡ್ಡನಾಗಮಂಗಲದ ವೀರಭದ್ರಸ್ವಾಮಿ ಲೇಔಟ್‌ನಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಪತ್ತೆಯಾಗಿದೆ. ಭಾರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಸುಮಾರು 2.04 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾ ಮೂಲದ ವಿಕ್ಟರ್‌ ಒಬಿನ್ನಾ ಚುಕ್ವುಡಿ ಎಂಬಾತನು ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಸಂಗ್ರಹಿಸಿಟ್ಟಿದ್ದ. ಈ ಕುರಿತು ನಿಖರ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, 2.43 ಕೆ.ಜಿ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಕ್ಟರ್‌ ಒಬಿನ್ನಾ ಚುಕ್ವುಡಿಯನ್ನು ಬಂಧಿಸಲಾಗಿದ್ದು, ಆತನಿಂದ ಎರಡು ಮೊಬೈಲ್‌ ಹಾಗೂ ಒಂದು ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿಯಿಂದ ತರಿಸಿ ಮಾರಾಟ

ವಿಕ್ಟರ್‌ ಒಬಿನ್ನಾ ಚುಕ್ವುಡಿ ಹಲವು ವರ್ಷಗಳಿಂದ ಡ್ರಗ್ಸ್‌ ಜಾಲದಲ್ಲಿ ತೊಡಗಿದ್ದು, ದೆಹಲಿಯಿಂದ ಅಕ್ರಮವಾಗಿ ಮಾದಕವಸ್ತು ತರಿಸಿ ಮಾರಾಟ ಮಾಡುತ್ತಿದ್ದ. ಡ್ರಗ್ಸ್‌ ಪೆಡ್ಲರ್‌ ಮೆಸ್ಸೋ ಎಂಬಾತನ ಮೂಲಕ ಮಾದಕವಸ್ತು ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ. ಮನೆಯಲ್ಲಿಯೇ ಸಂಗ್ರಹಿಸಿಡುತ್ತಿದ್ದ ಈತ ಪೊಟ್ಟಣಗಳನ್ನು ತಯಾರಿಸಿ ಹಲವು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿಕ್ಟರ್‌ ಒಬಿನ್ನಾ ಚುಕ್ವುಡಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾದಕವಸ್ತು ಜಾಲ ತಡೆಗೆ ಪೊಲೀಸರು ಹತ್ತಾರು ಕ್ರಮ ತೆಗೆದುಕೊಂಡರೂ, ನಿಗಾ ಇರಿಸಿದರೂ ಆಗಾಗ ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಪತ್ತೆಯಾಗುತ್ತಲೇ ಇರುತ್ತದೆ. ಅದರಲ್ಲೂ, ನೈಜೀರಿಯಾ ಸೇರಿ ಹಲವು ದೇಶಗಳ ಪೆಡ್ಲರ್‌ಗಳು, ಮಾರಾಟಗಾರರೇ ಜಾಲದಲ್ಲಿ ತೊಡಗಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ