Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಂತಾಮಣಿ: ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕಚೇರಿಯಲ್ಲಿ ದಸರಾ ಆಚರಣೆ

ಸುದ್ದಿಮೂಲ ವಾರ್ತೆ

ಚಿಂತಾಮಣಿ, ಅ.24: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಚಿಂತಾಮಣಿಯ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿರವರ ಗೃಹ ಕಛೇರಿಯಲ್ಲಿ ದುರ್ಗಾಮಾತೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಣೆ ಮಾಡಿ ಸಾವಿರಾರು ಕಾರ್ಯಕರ್ತರಿಗೆ ಸಿಹಿ ಹಂಚಿ ಎಲ್ಲಾ ಜನತೆಗೂ ಜೆಕೆ ಕೃಷ್ಣಾರೆಡ್ಡಿರವರು ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.

ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿರವರು ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ರಾಜಕೀಯಕ್ಕಾಗಿ ಪದಾರ್ಪಣೆ ಮಾಡಿದ ಹದಿನಾಲ್ಕು ವರ್ಷಗಳಿಂದಲೂ ಪ್ರತಿ ವರ್ಷ ತಪ್ಪದೇ ತಮ್ಮ ಜೆಡಿಎಸ್ ಪಕ್ಷದ ಗೃಹಕಛೇರಿಯಲ್ಲಿ ಆದ್ದೂರಿಯಾಗಿ ನಾಡಹಬ್ಬ ದಸರಾ ಹಬ್ಬವನ್ನು ಆಚರಣೆ ಮಾಡುತ್ತಾ ಬರುತ್ತಿದ್ದಾರೆ.

ಈ ವೇಳೆ ಮಾತನಾಡಿದ ಕೃಷ್ಣಾರೆಡ್ಡಿ, ಸಮಾಜಕ್ಕೆ ಕೆಟ್ಟದ್ದನ್ನು ಬಯಸಿ, ಸಮಾಜದಲ್ಲಿ ಆಶಾಂತಿ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದ ದುಷ್ಟ ಶಕ್ತಿಗಳನ್ನು ದುರ್ಗಾಮಾತೆ ಸಂಹಾರ ಮಾಡಿರುವ ಹಿನ್ನಲೆಯಲ್ಲಿ ವಿಜಯೋತ್ಸವ ಆಚರಣೆ ಮಾಡುವ ಸಲುವಾಗಿ ದೇಶದಾದ್ಯಂತಹ ವಿಜಯದಶಮಿ ಹಬ್ಬವನ್ನು ಮಾಡಲಾಗುತ್ತದೆ. ಅದರಂತೆ ನಮ್ಮ ಕಛೇರಿಯಲ್ಲಿಯೂ ಕೂಡ ಪ್ರತಿ ವರ್ಷದಂತೆ ನಮ್ಮ ಕಾರ್ಯಕರ್ತರೊಂದಿಗೆ ಸೇರಿ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಣೆ ಮಾಡುತ್ತಿದ್ದು,ದುರ್ಗಾಮಾತೆ ನಮ್ಮೆಲ್ಲರ ಮೇಲೆ ಕರುಣೆ ತೋರಿ ಉತ್ತಮ ಮಳೆಯಾಗಿ ಉತ್ತಮ ಬೆಳೆಯಾಗಿ ಜನ ಜಾನುವಾರಗಳು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿರುವುದಾಗಿ ತಿಳಿಸಿದರು.

ಈ ದಸರಾ ಪೂಜಾ ಕಾರ್ಯಕ್ರಮದಲ್ಲಿ ಸಾವಿರರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದು, ಎಲ್ಲಾರಿಗೂ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿರವರ ಕಡೆಯಿಂದ ಸಹಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತಿತ್ತರರು ಉಪಸ್ಥಿತಿರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ