Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಒತ್ತು ನೀಡಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.26: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ, ನೀರಿನ ಸದ್ಬಳಕೆಯಾಗದೆ ಬೇಸಿಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ರೂಪಿಸಲು ಒತ್ತು ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ ಯೋಜನೆ ಮತ್ತು ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಸಭೆಯಲ್ಲಿ ಪಾಲ್ಗೊಂಡು ಸಣ್ಣ ನೀರಾವರಿ ಯೋಜನೆಗಳ ಬಗ್ಗೆ ವಿಸ್ತ್ರುತ ಮಾಹಿತಿ ಪಡೆದುಕೊಂಡರು.

ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಜಲಮೂಲಗಳಿಗೆ ಕೊರತೆಯಿಲ್ಲ. ಉತ್ತಮ ಮಳೆಯೂ ಆಗುತ್ತದೆ. ಆದರೆ, ನೀರನ್ನ ಸಮರ್ಪಕವಾಗಿ ಬಳಸಲು ಅಗತ್ಯ ಯೋಜನೆಗಳು ಇಲ್ಲದ ಕಾರಣ ನೀರು ಹರಿದು ಹೋಗುತ್ತಿದೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆರೆಗಳ ಅಭಿವೃದ್ದಿ ಮತ್ತು ನೀರಿನ ಸಮರ್ಪಕ ಬಳಕೆಗೆ ಯೋಜನೆಗಳ ಅಗತ್ಯವಿದೆ ಎಂದು ಹೇಳಿದರು.

ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ, ಅದರಲ್ಲಿನ ನೀರಿನ ಸದ್ಬಳಕೆ ನಿರೀಕ್ಷತ ಮಟ್ಟದಲ್ಲಿ ಸಾಧ್ಯವಾಗುತ್ತಿಲ್ಲ. ಜಲಮೂಲಗಳಲ್ಲಿನ ನೀರಿನ ಉಳಿತಾಯ, ಸಮರ್ಪಕ ಬಳಕೆಯಿಂದ ಅಂತರ್ಜಲ ಹೆಚ್ಚಳ ಸಾಧ್ಯ. ಅಲ್ಲದೇ, ಬರದಂತಹ ಪರಿಸ್ಥಿತಿಯಲ್ಲಿ ಈ ಯೋಜನೆಗಳು ನಮ್ಮ ಕೈ ಹಿಡಿಯುತ್ತವೆ. ಕೆರೆಗಳನ್ನು ತುಂಬಿಸುವ, ನೀರನ್ನ ಸಂಗ್ರಹಿಸಿ ಅಂತರ್ಜಲ ಹೆಚ್ಚಳಕ್ಕೆ ಅನುವು ಮಾಡಿಕೊಡುವ ಯೋಜನೆಗಳಿಗೆ ಒತ್ತು ನೀಡಬೇಕು ಎಂದು ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಪ್ರಸ್ತುತ 57 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳಲ್ಲಿ 27 ಕೆರೆಗಳ ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 1300 ಕೆರೆಗಳಿವೆ. ಬೇಸಿಗೆಯ ಸಮಯದಲ್ಲಿ ಜಿಲ್ಲೆಯಲ್ಲಿ ನೀರಿನ ಅಭಾವ ಕಂಡು ಬರುತ್ತದೆ. ನೀರಿನ ಅಭಾವವನ್ನು ನೀಗಿಸುವ ನಿಟ್ಟಿನಲ್ಲಿ ಕೆರೆಗೆ ನೀರು ತುಂಬಿಸುವ ಏತ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳುವ ಅವಶ್ಯಕತೆಯಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನ ಚುರುಕುಗೊಳಿಸಬೇಕು ಎಂದು ಸೂಚಿಸಿದರು.

ಅಕ್ಟೋಬರ್‌ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯ ಕಾಮಗಾರಿಗಳ ವಸ್ತುಸ್ಥಿತಿಯ ಬಗ್ಗೆ ವರದಿಯನ್ನು ನೀಡುವಂತೆ ಸಣ್ಣ ನೀರಾವರಿ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಪರಿಂಟೆಂಡೆಂಟ್‌ ಇಂಜಿನಿಯರ್‌ ಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಿವಮೊಗ್ಗ ವಿಭಾಗದ ಮುಖ್ಯ ಇಂಜಿನೀಯರ್‌ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ