Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತದಿಂದ ಗಾಯಗೊಂಡ ಪೌರಕಾರ್ಮಿಕನ ಪತ್ನಿಗೆ ಉದ್ಯೋಗ  

ಸುದ್ದಿಮೂಲ ವಾರ್ತೆ

ಮೈಸೂರು, ಆ.31:ನಗರದ ದೇವರಾಜ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾರಿನಿಂದ ಅಪಘಾತಕ್ಕೊಳಗಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿರುವ ಪೌರಕಾರ್ಮಿಕ ಮಹದೇವ ಅವರನ್ನು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಜೀವನ ನಿರ್ವಹಣೆಗಾಗಿ ಅವರ ಪತ್ನಿಗೆ ಉದ್ಯೋಗ ನೀಡುವುದರ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅವರಿಗೆ ಅಗತ್ಯ ನೆರವು ನೀಡಲಾಗುದು ಎಂದು ಭರವಸೆ ನೀಡಿದರು.

ಮಹದೇವ ಅವರ ಆರೋಗ್ಯ ಕುರಿತು ವೈದ್ಯರ ಜೊತೆ ಮಾತಾನಾಡಿದ್ದು, ಸದ್ಯದಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಗಾಯಗೊಂಡಿರುವ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಅವರು ಚಿಕ್ಕ ವಯಸ್ಸಿನಲ್ಲೇ ಈ ರೀತಿ ಗಾಯಗೊಂಡಿರುವುದು ನೋವಿನ ಸಂಗತಿ. ಅವರ ಕುಟುಂಬಕ್ಕೆ ಅವರೇ ಆಧಾರ ಸ್ತಂಭವಾಗಿದ್ದರು. ಹೀಗಾಗಿ ಅವರ ಜೀವನೋಪಾಕ್ಕಾಗಿ ಅಗತ್ಯ ಆರ್ಥಿಕ ನೆರವು ನೀಡುವ ಬಗ್ಗೆ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ