Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.19: ನಗರದ ಪೂರ್ವ ವಲಯ ಪುಲಕೇಶಿನಗರ ಕ್ಷೇತ್ರದ ಶಾಂಪುರ ವ್ಯಾಪ್ತಿಯಲ್ಲಿ ದ್ವಿತೀಯ ಮಳೆ ನೀರುಗಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿಮಾರ್ಣ ಮಾಡಿಕೊಂಡಿರುವ ಸ್ಥಳದಲ್ಲಿ ಇಂದಿನಿಂದ ಒತ್ತುವರಿ ತೆರವು ಕಾರ್ಯಚರಣೆಯನ್ನು ಪ್ರಾರಂಭಿಸಲಾಗಿದೆ.

ಶಾಂಪುರ ವ್ಯಾಪ್ತಿಯಲ್ಲಿ ಸರ್ವೇ ಸಂಖ್ಯೆ 6, 12 ಮತ್ತು 12 ಸೇರಿದಂತೆ ಸುಮಾರು 700 ಮೀಟರ್ ಉದ್ದದ ದ್ವಿತೀಯ ಮಳೆ ನೀರುಗಾಲುವೆಯ ಮೇಲೆ 13 ಕಟ್ಟಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಈಗಾಗಲೇ ಕಂದಾಯ ಇಲಾಖೆಯ ಭೂಮಾಕರಿಂದ ಒತ್ತುವರಿಯಾಗಿರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ ಒತ್ತುವರಿ ಮಾಡಿರುವವರಿಗೆ ತಹಶೀಲ್ದಾರ್ ರವರಿಂದ ನೋಟೀಸ್ ಕೂಡಾ ನೀಡಲಾಗಿದೆ.

ಮುಂದುವರಿದು, ಕಂದಾಯ ಇಲಾಖೆಯ ಭೂಮಾಪಕರು, ವಾರ್ಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬೃಹತ್ ನೀರುಗಾಲುವೆ ವಿಭಾಗದ ಇಂಜಿನಿಯರ್ ರವರ ನೇತೃತ್ವದಲ್ಲಿ ಇಂದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ಸದರಿ ರಾಜಕಾಲುವೆಯ ಪ್ರದೇಶದಲ್ಲಿ ಕಟ್ಟಗಳನ್ನು ನಿಮಾರ್ಣ ಮಾಡಿಕೊಂಡಿರುವುದರಿಂದ ಎಲೆಕ್ಟ್ರಾನಿಕ್ ಟೋಟಲ್ ಸ್ಟೇಷನ್(ETS) ಸರ್ವೇ ಮೂಲಕ ಮತ್ತೊಮ್ಮೆ ಸಮೀಕ್ಷೆ ನಡೆಸಿ ಒತ್ತುವರಿ ಜಾಗವನ್ನು ತೆರವಗೊಳಿಸಬೇಕು. ಈ ಸಂಬಂಧ ನಾಳೆಯಿಂದ ETS ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯ ಮುಂದುವರಿಸಲಾಗುತ್ತದೆ.

ಈಗಾಗಲೇ ಗುರುತಿಸರುವಂತಹ ಒತ್ತುವರಿ ಪ್ರದೇಶದಲ್ಲಿ ಮನೆಯ ಮಾಲೀಕರೇ ಸ್ವಯಂಪ್ರೇರಿತವಾಗಿ ತೆರವು ಮಾಡಿಕೊಳ್ಳುತ್ತಿದ್ದು, ETS ಸಮೀಕ್ಷೆ ಪೂರ್ಣಗೊಂಡ ಬಳಿಕ ಸಂಪೂರ್ಣ ಒತ್ತುವರಿಯನ್ನು ತೆರವುಗೊಳಿಸಿ ದ್ವಿತೀಯ ಮಳೆ ನೀರುಗಾಲುವೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಚೆನ್ನಸಂದ್ರದಲ್ಲಿ ಕಾರ್ಯಾಚರಣೆ:

ಮಹದೇವಪುರ ವಲಯ ಕಾಡುಗೋಡಿ ವಾರ್ಡ್ ಚೆನ್ನಸಂದ್ರ ವ್ಯಾಪ್ತಿಯಲ್ಲಿ ಸುಮಾರು 30 ಮೀಟರ್ ಉದ್ದದ ರಾಜಕಾಲುವೆಯಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಮಳಿಗಳನ್ನು ಸ್ವಯಂ ಪ್ರೇರಿತವಾಗಿ ಅವರೇ ತೆರವುಗೊಳಿಸಿಕೊಳ್ಳುತ್ತಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ