Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಪತ್ರ

ಬೆಂಗಳೂರು,ಜೂ.17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ