Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಮತದಾರರಿಗಾಗಿ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 2: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಯಲ್ಲಿರುವ ಗೈರು ಮತದಾರರಿಗಾಗಿ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಅರ್ಹ ಗೈರು ಮತದಾರರು ಮೇ 4ರವರೆಗೆ ಈ ಸೆಂಟರ್‌ನಲ್ಲಿ ಮತದಾನ ಮಾಡಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಿರುವ ಬಗ್ಗೆ ಎಲ್ಲ ಎವಿಇಎಸ್ ಮತದಾರರಿಗೆ ಎಸ್.ಎಂ.ಎಸ್. ಮೂಲಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬೆಸೈಟ್‌ನಲ್ಲಿ ಪ್ರಚುರಪಡಿಸಬೇಕು ಎಂದರು.

ಎಲ್ಲ ಎವಿಇಎಸ್ ಮತದಾರರಿಗೆ ಪಿವಿಸಿ ಸ್ಥಾಪನೆಯ ಸ್ಥಳ, ವಿಳಾಸ, ದಿನಾಂಕ, ಸಮಯದ ಮಾಹಿತಿಯನ್ನು ಎಸ್.ಎಂ.ಎಸ್. ಮೂಲಕ ತಿಳಿಸಬೇಕು. ಪಿವಿ ಸೆಂಟರ್‌ನಲ್ಲಿ ಅಂಚೆ ಮತದಾನ ಮಾಡಲು ಮೇ 2ರಿಂದ 4ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಅಂಚೆ ಮತದಾನಕ್ಕಾಗಿ ನಮೂನೆ- 12ಡಿಯನ್ನು ಭರ್ತಿ ಮಾಡಿ ಸಲ್ಲಿಸಿದ ಎವಿಇಎಸ್ ಸಿಬ್ಬಂದಿಗಳು ಕೇವಲ ಈ ಪಿವಿಸಿ (ಅಂಚೆ ಮತದಾನ ಕೇಂದ್ರ)ದಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶವಿರುತ್ತದೆ. ಉಳಿದಂತೆ ಬೇರೆ ಯಾವ ಕ್ರಮದಲ್ಲಿಯೂ ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕು ಎಂದು ತಿಳಿಸಿದರು.

ಪೋಸ್ಟಲ್ ವೋಟಿಂಗ್ ನಡೆಯುವ ದಿನಾಂಕವನ್ನು ಚುನಾವಣಾ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು. ಅಂಚೆ ಮತದಾನ ನಡೆಯುವ ವಿಧಾನವನ್ನು ಅಭ್ಯರ್ಥಿ ಅಥವಾ ಅವರ ಏಜೆಂಟ್‌ಗಳಿಗೆ ವೀಕ್ಷಿಸಲು ಅವಕಾಶ ಇರುತ್ತದೆ ಎಂದು ಹೇಳಿದರು.

ಅಂಚೆ ಮತದಾನ ಕೇಂದ್ರದಲ್ಲಿ ಮತದಾರರಿಗೆ ಅಂಚೆ ಮತಪತ್ರ, ಮತದಾನಕ್ಕೆ ಸಂಬಂಧಿಸಿದಂತೆ 13ಎ, 13ಬಿ, 13ಸಿ ಇತರೆ ಲಕೋಟೆಗಳನ್ನು ನೀಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ನಿಯೋಜಿತ ಸಿಬ್ಬಂದಿ

ಮತದಾರನ ಗುರುತು ಪತ್ರ (ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳ ಪೈಕಿ) ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ದೊಡ್ಡ ಕಾರ್ಡ್ ಬೋರ್ಡ್‌ನಲ್ಲಿ ಲಗತ್ತಿಸಿ ಮತದಾನ ಕೇಂದ್ರದ ಹೊರಗಡೆ ಇಡಬೇಕು. ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾರರ ಸಂಖ್ಯೆಗೆ ಅನುಗುಣವಾಗಿ ಹಾಗೂ ಶೇ.10ರಷ್ಟು ಹೆಚ್ಚುವರಿ ಅಂಚೆ ಮತಮತ್ರಗಳು, ಅಗತ್ಯ ಲಕೋಟೆಗಳು, ನೇರಳೆ ಬಣ್ಣದ ಸ್ಕೆಚ್ ಪೆನ್, ಗೋಂದು ಬಾಟಲಿ, ಸೆಲ್ಫ್ ಇಂಕಿಂಗ್ ಪ್ಯಾಡ್, ಸ್ಟೀಲ್ ಟ್ರಂಕ್, ಅವಶ್ಯಕ ರಿಜಿಸ್ಟರ್, ವೋಟಿಂಗ್ ಕಂಪಾರ್ಟ್‌ಮೆಂಟ್, ಎವಿಇಎಸ್ ಮತದಾರರ ಪಟ್ಟಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಹೊಂದಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ

ಸುಜಯ್, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ