ಮುಸ್ಲಿಂ ಬಾಂಧವರಿಂದ ಬಕ್ರೀದ ಸಂಭ್ರಮ
ಸುದ್ದಿಮೂಲವಾರ್ತೆ
ಕೊಪ್ಪಳ ಜೂ 29:ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬದ ಆಚರಣೆಯನ್ನು ಕೊಪ್ಪಳದಲ್ಲಿ ಭಕ್ತಿ ಶ್ರದ್ದೆಯಿಂದ ಆಚರಿಸಿದರು.
ಇಂದು ಬೆಳಗ್ಗೆ ಕೊಪ್ಪಳದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಮಾಡಿದರು. ಸಾವಿರಾರು ಜನ ಮುಸ್ಲಿಂ ಬಾಂಧವರು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ಹಲವರು ಹೊಸಬಟ್ಟೆ ತೊಟ್ಟು ಸಾಮೂಹಿಕವಾಗಿ ಪ್ರಾರ್ಥಿಸಿದರು.
ಈದ್ಗಾ ಮೈದಾನದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ
ಜಿಲ್ಲಾಧಿಕಾರಿ ಸುಂದರೇಶಬಾಬು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋದಾ ವಂಟಿಗೋಡ.ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ ರಾಜಶೇಖರ ಹಿಟ್ನಾಳ, ನಗರಸಭೆ ಸದಸ್ಯರಾದ ಅಕ್ಬರ ಪಲ್ಟನ್, ಅಮ್ಜದ್ ಪಟೇಲ್. ರಾಜಶೇಖರ ಆಡೂರು, ಮುತ್ತುರಾಜ ಕುಷ್ಟಗಿ, ನಗರಸಭೆ ಮಾಜಿ ಅಧ್ಯಕ್ಷ ಗವಿಸಿದ್ದಪ್ಪ ಕಂದಾರಿ ಸೇರಿ ಹಲವರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹಲವು ಹಿಂದು ಸಮಾಜದ ಮುಖಂಡರು ಸಹ ಭಾಗಿ
ಪರಸ್ಪರ ಶುಭಾಶಯ ವಿನಮಯ ಮಾಡಿಕೊಂಡರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.