Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಂಡ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕನಿಗೆ ಬೀಳ್ಕೊಡುಗೆ ಸಮಾರಂಭ

ಸುದ್ದಿಮೂಲ ವಾರ್ತೆ


 ಆ.6 : ಹೊಸಕೋಟೆ ತಾಲೂಕು ನಂದುಗುಡಿ ಹೋಬಳಿಯ ಗುಂಡ್ರಹಳ್ಳಿ ಸ.ಹಿ.ಪ್ರಾ. ಶಾಲೆ ಯಲ್ಲಿ ಸುಮಾರು 19 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗಷ್ಟೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಎಂ.ಮುನಿಶಾಮಯ್ಯ ರವರಿಗೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸಮಸ್ತ ಗ್ರಾಮಸ್ಥರ ಪರವಾಗಿ ಬೀಳ್ಕೊಡಲಾಯಿತು.


ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಮುಖ್ಯ ಶಿಕ್ಷಕ ಎಂ. ಮುನಿಶಾಮಯ್ಯ ನವರನ್ನು ಸನ್ಮಾನಿಸಿ ಮಾತನಾಡಿದ ಅವರು ಶಿಕ್ಷಕರು ಅತ್ಯಂತ ಶ್ರದ್ದೆ ಆಸಕ್ತಿಯಿಂದ ಉತ್ತಮ ಬೋಧನೆ ಮತ್ತು ಶಾಲಾ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಬಡ ವಿದ್ಯಾರ್ಥಿಗಳಿಗೆ ವಿದ್ಯಾ ದಾನ ಮಾಡಿ ಅವರ ಬಾಳು ಬೆಳಕಾಗಿಸಿದ್ದಾರೆ. ಇವರಿಂದ ಕಲಿತ ವಿದ್ಯಾಥಿಗಳು ಕೂಡ ಅವರ ಆದರ್ಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಗುರುಗಳು ಅನಿಸಿಕೊಂಡಿದ್ದಾರೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಶಿಕ್ಷಣ ಸಂಯೋಜಕರಾದ ರವಿಕುಮಾರ್, ಸಿ ಆರ್ ಪಿ ಗಳಾದ ನಂದೀಶ್ ಕುಮಾರ್, ರಮೇಶ್, ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಣ್ಣ, ಮುಖ್ಯ ಶಿಕ್ಷಕರಾದ ವೆಂಕಟರಮಣಪ್ಪ ಸಹಶಿಕ್ಷಕರಾದ ಗಂಗರಾಜು, ಸುಬ್ರಾಯಪ್ಪ, ತಿಮ್ಮರಾಯಪ್ಪ, ರಾಜು, ಬಾಲಾಜಿ, ಗೋಪಾಲಪ್ಪ, ಚನ್ನಕೇಶವ, ಅಕ್ಷರ ಫೌಂಡೇಶನ್, ಸಂಯೋಜಕರಾದ ಮಂಜುನಾಥ್, ಗ್ರಾ.ಪಂ. ಸದಸ್ಯರಾದ ಕೆಂಪಮ್ಮ ರಾಮಕೃಷ್ಣಪ್ಪ, ಮಾಜಿ ಗ್ರಾ.ಪಂ. ಸದಸ್ಯ ಶಂಕರ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ