Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಬೀಳ್ಕೊಡುಗೆ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಸೆ.2:ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಜಯಕುಮಾರ್ ಅವರನ್ನು ಇಲಾಖೆಯ ಕಛೇರಿಯಲ್ಲಿ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಅದ್ಧೂರಿಯಾಗಿ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಸಹಾಯಕ ನಿರ್ದೇಶಕ ವಿಜಯಕುಮಾರ್ ಮಾತನಾಡಿ, ಕಳೆದ 16 ತಿಂಗಳುಗಳಿಂದ ಚಿಕ್ಕಬಳ್ಳಾಪುರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ನಿರ್ವಹಿಸಿಕೊಂಡು ಬಂದಿದ್ದು, ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕ್ರೀಡಾಂಗಣಗಳಿಗೆ ಇಲಾಖೆಯಿಂದ ಬರುವ

ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತೃಪ್ತಿಕರವಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತಿಯಾಗುತ್ತಿದ್ದೇನೆ. ನನ್ನೊಂದಿಗೆ ಕಾರ್ಯನಿರ್ವಹಿಸಿದ ಕಚೇರಿ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್‌ರವರು ಮಾತನಾಡಿ, ಸುಮಾರು 16 ತಿಂಗಳ ಹಿಂದೆ ಜಿಲ್ಲೆಗೆ ಆಗಮಿಸಿದ ವಿಜಯಕುಮಾರ್‌, ಉತ್ತಮ ರೀತಿಯಲ್ಲಿ ಕ್ರೀಡೆಗಳಿಗೆ ಸಹಕಾರ ನೀಡುತ್ತಾ, ಕ್ರೀಡಾಂಗಣಗಳ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಜಿಲ್ಲೆಯ ಬೇರೆ ತಾಲ್ಲೂಕುಗಳ ಕ್ರೀಡಾಂಗಣಗಳ ಅಭಿವೃದ್ಧಿಗೂ ಸಹ ಆದ್ಯತೆ ನೀಡಿದ್ದಾರೆ ಎಂದು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಟಿ.ಪಿ.ಒ. ಅರುಣ್‌ಕುಮಾರ್, ಗೌರಿಬಿದನೂರಿನ ನಿವೃತ್ತ ದೈಹಿಕ ಶಿಕ್ಷಕ ನಾರಾಯಣಸ್ವಾಮಿ, ಜಯಂತಿಗ್ರಾಮ ನಾರಾಯಣಸ್ವಾಮಿ, ಹಾಕಿ ತರಬೇತಿದಾರರಾದ ದೇವರಾಜಮ್ಮ, ಶ್ರೀಧರ್, ನಾಸಿರ್ ಅಹಮದ್‌ಖಾನ್, ಕಛೇರಿಯ ಸಿಬ್ಬಂದಿ ರಾಘವೇಂದ್ರ,ನಾರಾಯಣಪ್ಪ, ಬಾಲು, ಮುನಿಯಪ್ಪ, ಲಲಿತ, ಶಶಿಕಲಾ, ಕಾವ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ